ಐಎಎಸ್ ಜಂಟಿ ವೇದಿಕೆ ಮುಖ್ಯ ಕಾರ್ಯದರ್ಶಿ ಮೇಲಿನ ಹಲ್ಲೆ ಖಂಡಿಸಿ ಕೈಗೆ ಕಪ್ಪುಪಟ್ಟಿ ಕಟ್ಟಿಕೊಂಡು ಮಾಧ್ಯಮಗೋಷ್ಠಿ ನಡೆಸಿದ ಚಿತ್ರ 
ದೇಶ

ದೆಹಲಿ ಮುಖ್ಯಕಾರ್ಯದರ್ಶಿ ಮೇಲೆ ಹಲ್ಲೆ ಪ್ರಕರಣ: ಸಿಸಿಟಿವಿ ವಿರೂಪಗೊಳಿಸಲಾಗಿದೆ-ಪೊಲೀಸ್

ದೆಹಲಿ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಮೇಲಿನ ಹಲ್ಲೆ ಪ್ರಕರಣದ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರು ಸಿಸಿಟಿವಿವನ್ನು ವಿರೂಪಗೊಳಿಸಲಾಗಿದೆ. ವಿಧಿ ವಿಜ್ಞಾನ ಪ್ರಾಯೋಗಾಲಯದಿಂದ ಅದನ್ನು ಶೀಘ್ರದಲ್ಲಿಯೇ ಪರಿಶೀಲಿಸಲಾಗುವುದು ಎಂದು ತಿಳಿಸಿದ್ದಾರೆ.

ದೆಹಲಿ: ದೆಹಲಿ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಮೇಲಿನ ಹಲ್ಲೆ ಪ್ರಕರಣದ ಸಂಬಂಧ  ತನಿಖೆ ನಡೆಸುತ್ತಿರುವ  ಪೊಲೀಸರು ಸಿಸಿಟಿವಿವನ್ನು ವಿರೂಪಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮನೆಯಲ್ಲಿ  ಸಭೆ ನಡೆದಿತ್ತು. ಸಿಸಿಟಿವಿಯಲ್ಲಿ ವೇಳೆ ಬದಲಾಗಿದ್ದು, ಅದನ್ನು  ವಿರೂಪಗೊಳಿಸಲಾಗಿದೆ ವಿಧಿ ವಿಜ್ಞಾನ ಪ್ರಾಯೋಗಾಲಯದಿಂದ ಅದನ್ನು ಶೀಘ್ರದಲ್ಲಿಯೇ ಪರಿಶೀಲಿಸಲಾಗುವುದು ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಹರೇಂದ್ರ ಸಿಂಗ್ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.

ಈ ಪ್ರಕರಣ ಸಂಬಂಧ ದೆಹಲಿ ಲೆಪ್ಟಿನೆಂಟ್ ಗೌರ್ನರ್ ಅನಿಲ್ ಬೈಜಾಲೊನ್ ಮೊನ್ನೆ ದಿನ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಫೆ. 20 ರಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿವಾಸದಲ್ಲಿ ನಡೆದ ಸಭೆಯಲ್ಲಿ  ಶಾಸಕರಾದ ಅಮಾನತುಲ್ಲಾಖಾನ್ ಹಾಗೂ ಪ್ರಕಾಶ್ ಜಾರ್ವಾಲ್ ಮುಖ್ಯ ಕಾರ್ಯದರ್ಶಿ ಮೇಲೆ ಹಲ್ಲೆ ನಡೆಸಿದ್ದರು

ಭಾರತೀಯ ಆಡಳಿತ ಸೇವಾ ವಿಭಾಗದ ಕಾರ್ಯದರ್ಶಿ ಮನೀಶಾ ಸಕ್ಸೇನಾ , ಗೃಹ ಖಾತೆ ರಾಜ್ಯಸಚಿವರೊಂದಿಗೆ ಮಾತುಕತೆ ನಡೆಸಿ, ಅಧಿಕಾರಿಗಳಿಗೆ ಸೂಕ್ತ ರಕ್ಷಣೆ ಒದಗಿಸಬೇಕೆಂದು ಆಗ್ರಹಿಸಿದ್ದರು.

ಪ್ರಸ್ತುತ ಎಎಪಿಯ ಇಬ್ಬರು ಶಾಸಕರನ್ನು 16 ದಿನಗಳ ಕಾಲ ನ್ಯಾಯಾಂಗ
ಬಂಧನಕ್ಕೆ ಒಪ್ಪಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!