ಕಾರ್ತಿ ಚಿದಂಬರಂ 
ದೇಶ

ಐಎನ್ ಎಕ್ಸ್ ಮೀಡಿಯಾ ಪ್ರಕರಣ: ಕಾರ್ತಿ ಚಿದಂಬರಂ ಸಿಎಗೆ 14 ದಿನ ನ್ಯಾಯಾಂಗ ಬಂಧನ

ಐಎನ್ ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮಾಜಿ ಕೇಂದ್ರ ಸಚಿವ...

ನವದೆಹಲಿ: ಐಎನ್ ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರ ಲೆಕ್ಕ ಪರಿಶೋಧಕ (ಸಿಎ) ಎಸ್.ಭಾಸ್ಕರರಾಮನ್ ಅವರನ್ನು ದೆಹಲಿ ಕೋರ್ಟ್ 14 ದಿನ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಫೆಬ್ರವರಿ 16ರಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಭಾಸ್ಕರರಾಮನ್ ಅವರನ್ನು ರಾಷ್ಟ್ರ ರಾಜಧಾನಿಯ ಪ್ರತಿಷ್ಠಿತ ಸ್ಟಾರ್ ಹೋಟೆಲ್ ವೊಂದರಲ್ಲಿ ಬಂಧಿಸಿದ್ದರು. ಬಳಿಕ ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ಫೆ.26ರ ವರೆಗೆ ತಮ್ಮ ವಶಕ್ಕೆ ಪಡೆದಿದ್ದರು. ಇಂದು ಮತ್ತೆ ಕೋರ್ಟ್ ಗೆ ಹಾಜರುಪಡಿಸಿ ಇನ್ನೂ ಮೂರು ದಿನ ಆರೋಪಿಯನ್ನು ತನ್ನ ವಶಕ್ಕೆ ನೀಡಬೇಕು ಎಂದು ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಮನವಿ ಮಾಡಿದರು.
ಇಡಿ ಮನವಿಯನ್ನು ತಿರಸ್ಕರಿಸಿದ ವಿಶೇಷ ನ್ಯಾಯಾಧೀಶ ಎನ್ ಕೆ ಮಲ್ಹೋತ್ರಾ ಅವರು, ಆರೋಪಿ ಭಾಸ್ಕರರಾಮನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದ್ದಾರೆ.
ಅಕ್ರಮ ಹಣ ವಹಿವಾಟು ತಡೆ ಕಾಯ್ದೆ ಅಡಿ ಕಾರ್ತಿ ಚಿದಂಬರಂ ವಿರುದ್ಧ ಇಡಿ ಮೇ, 2017ರಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಪ್ರಕರಣ ಸಂಬಂಧ ಕಾರ್ತಿ ಚಿದಂಬರಂ ಲೆಕ್ಕ ಪರಿಶೋಧಕ (ಸಿಎ) ಎಸ್.ಭಾಸ್ಕರರಾಮನ್ ಅವರನ್ನು ಬಂಧಿಸಿತ್ತು.
ಐಎನ್ ಎಕ್ಸ್ ಮೀಡಿಯಾ ಭ್ರಷ್ಟಾಚಾರ ಹಾಗೂ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಉಲ್ಲಂಘಿಸಿದ ಆರೋಪ ಎದುರಿಸುತ್ತಿರುವ ಕಾರ್ತಿ ಚಿದಂಬರಂ ಅವರ ವಿರುದ್ಧ ಸಿಬಿಐ ಸಹ ಪ್ರಕರಣ ದಾಖಲಿಸಿಕೊಂಡಿದೆ. ಅಲ್ಲದೆ ಹಲವು ಬಾರಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದರೂ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿರುವ ಕಾರ್ತಿ ವಿರುದ್ಧ ಲುಕ್ ಔಟ್ ನೋಟಿಸ್ ಸಹ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!