ಬಲಿಯಾ: ಭಾರತ್ ಮಾತಾ ಕಿ ಜೈ ಎಂದು ಹೇಳದವರು ಪಾಕಿಸ್ತಾನಿಗಳು ಎಂದು ಉತ್ತರಪ್ರದೇಶದ ಬಿಜೆಪಿ ಶಾಸಕ ಬೈರಿಯಾ ಸುರೇಂದ್ರ ನರೈನ್ ಸಿಂಗ್ ಅವರು ಸೋಮವಾರ ಹೇಳಿದ್ದಾರೆ.
ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ಭಾರತ್ ಮಾತಾ ಕಿ ಜೈ ಎಂದು ಹೇಳಲು ನಿರಾಕರಿಸುವವರು ಪಾಕಿಸ್ತಾನಿಗಳು ಎಂದು ಹೇಳಿದ್ದಾರೆ.
ನರೈನ್ ಅವರು ವಿವಾದಾತ್ಮಕ ಹೇಳಿಕೆ ನೀಡುತ್ತಿರುವುದು ಇದು ಮೊದಲೇನಲ್ಲ. ಈ ಹಿಂದೆ ಕೂಡ ಇದೇ ರೀತಿಯ ಹೇಳಿಕೆಯನ್ನು ನೀಡಿದ್ದರು. 2024ರ ವೇಳೆ ಭಾರತ ಹಿಂದೂ ರಾಷ್ಟ್ರವಾಗಲಿದೆ ಮತ್ತು ಒಮ್ಮೆ ಭಾರತ ಹಿಂದೂರಾಷ್ಟ್ರವಾದ ಬಳಿಕ ದೇಶದಲ್ಲಿರುವ ಮುಸ್ಲಿಮರು ಹಿಂದೂ ಸಂಸ್ಕೃತಿಯನ್ನು ಅನುಸರಿಸಬೇಕಾಗುತ್ತದೆ ಎಂದು ಹೇಳಿದ್ದರು.