ಮುಜಾಫರ್ ನಗರ: ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ 16 ವರ್ಷದ ಬಾಲಕಿ ಮೇಲೆ 22 ವರ್ಷದ ಯುವಕ ಅತ್ಯಾಚಾರ ಎಸಗಿದ್ದು, ಆ ಹೀನ ಕೃತ್ಯವನ್ನು ಆತನ ಸಹೋದರಿ ವಿಡಿಯೋ ಮಾಡಿದ್ದಾಳೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ನಗರದ ಸಿವಿಲ್ ಲೈನ್ಸ್ ಪ್ರದೇಶದಲ್ಲಿ ಭಾನುವಾರ ಈ ಘಟನೆ ನಡೆದಿದೆ.
ಯುವಕನ ಸಹೋದರಿ ಬಾಲಕಿಯನ್ನು ತನ್ನ ಮನಗೆ ಕರೆದೊಯ್ದಿದ್ದು, ಬಳಿಕ ತನ್ನ ಮೇಲೆ ಅತ್ಯಾಚಾರ ಎಸಗಲಾಗಿದೆ ಮತ್ತು ವಿಷಯ ಬಾಯಿ ಬಿಡದಂತೆ ಬೆದರಿಕೆ ಹಾಕಿರುವುದಾಗಿ ಬಾಲಕಿ ಆರೋಪಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಬಾಲಕಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.