ಶ್ರೀದೇವಿ 
ದೇಶ

ಆಕಸ್ಮಿಕವಾಗಿ ಬಾತ್ ಟಬ್‍ಗೆ ಬಿದ್ದು ಶ್ರೀದೇವಿ ಸಾವು, ಪ್ರಕರಣ ಮುಕ್ತಾಯ: ದುಬೈ ಪಬ್ಲಿಕ್ ಪ್ರಾಸಿಕ್ಯೂಷನ್

ಭಾರತೀಯ ಚಿತ್ರರಂಗದ ಮೋಹಕ ತಾರೆ ಶ್ರೀದೇವಿ ಅವರು ಆಕಸ್ಮಿಕವಾಗಿ ಬಾತ್ ಟಬ್ ಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ಪ್ರಕರಣವನ್ನು ಮುಕ್ತಾಯಗೊಳಿಸಿರುವುದಾಗಿ ದುಬೈ...

ದುಬೈ: ಭಾರತೀಯ ಚಿತ್ರರಂಗದ ಮೋಹಕ ತಾರೆ ಶ್ರೀದೇವಿ ಅವರು ಆಕಸ್ಮಿಕವಾಗಿ ಬಾತ್ ಟಬ್ ಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ಪ್ರಕರಣವನ್ನು ಮುಕ್ತಾಯಗೊಳಿಸಿರುವುದಾಗಿ ದುಬೈ ಪಬ್ಲಿಕ್ ಪ್ರಾಸಿಕ್ಯೂಷನ್ ಸ್ಪಷ್ಟಪಡಿಸಿದೆ. 
ಇಂತಹ ಪ್ರಕರಣಗಳನ್ನು ಕ್ರಮಬದ್ಧವಾಗಿ ಪೂರ್ಣಗೊಳಿಸಲಾಗಿದೆ, ನಟಿ ಆಕಸ್ಮಿಕವಾಗಿ ಬಾತ್ ಟಬ್ ಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ಫೋರೆನ್ಸಿಕ್ ವರದಿ ನೀಡಿದ್ದು ಅದರಂತೆ ಪ್ರಕರಣವನ್ನು ಮುಕ್ತಾಯಗೊಳಿಸಲಾಗಿದೆ ಎಂದು ದುಬೈ ಪಬ್ಲಿಕ್ ಪ್ರಾಸಿಕ್ಯೂಷನ್ ಹೇಳಿದೆ. 
ದುಬೈನ ಜನರಲ್‌ ಡಿಪಾರ್ಟ್‌ಮೆಂಟ್‌ ಆಫ್‌ ಫೋರೆನ್ಸಿಕ್‌ನಲ್ಲಿ ಮರಣೋತ್ತರ ಪರೀಕ್ಷೆ ಪ್ರಕ್ರಿಯೆ ಪೂರ್ಣಗೊಳಿಸಿ, ಪಾರ್ಥಿವ ಶರೀರವನ್ನು ಪೊಲೀಸರಿಗೆ ಒಪ್ಪಿಸಿತ್ತು.  ಅಲ್ಲಿನ ಕಾನೂನು ಪ್ರಕಾರ ದುಬೈ ಪೊಲೀಸರು ಪ್ರಕರಣ ಸಂಬಂಧ ತನಿಖೆ ನಡೆಸಿ ಇದೀಗ ಪಾರ್ಥಿವ ಶರೀರವನ್ನು ಭಾರತಕ್ಕೆ ಕೊಂಡೊಯ್ಯಲು ನಿರಪೇಕ್ಷಣಾ ಪತ್ರ ನೀಡಿದ್ದಾರೆ. 
ಸದ್ಯ ಶ್ರೀದೇವಿ ಅವರ ಪಾರ್ಥಿವ ಶರೀರವನ್ನು ಭಾರತಕ್ಕೆ ಕೊಂಡೊಯ್ಯಲು ದುಬೈ ಪೊಲೀಸರು ಶ್ರೀದೇವಿ ಕುಟುಂಬಕ್ಕೆ ನಿರಪೇಕ್ಷಣಾ ಪತ್ರವನ್ನು ನೀಡಿದ್ದಾರೆ. ಪಾರ್ಥಿವ ಶರೀರವನ್ನು ಸಂರಕ್ಷಣೆ ಮಾಡಿದ ಬಳಿಕ ಅಲ್ಲಿನ ಭಾರತೀಯ ರಾಯಬಾರಿ ಕಚೇರಿಗೆ ಗೌರವಪೂರ್ವಕವಾಗಿ ಪಾರ್ಥಿವ ಶರೀರವನ್ನು ಹಸ್ತಾಂತರ ಮಾಡಲಾಗುವುದು. ಆನಂತರ ಕುಟುಂಬಸ್ಥರು ಅವರ ಪಾರ್ಥಿವ ಶರೀರ ಮುಂಬೈಗೆ ತರಲಿದ್ದಾರೆ.
ದುಬೈನ ಎಮಿರೇಟ್ಸ್‌ ಟವರ್‌ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದ ಶ್ರೀದೇವಿ ಅವರು ಬಾತ್‌ರೂಮ್‌ಗೆ ತೆರಳಿದಾಗ ಹೃದಯ ಸ್ತಂಭನವಾಗಿದ್ದು, ಬಾತ್‌ಟಬ್‌ಗೆ ಬಿದ್ದು ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!