ಭಾರತ-ಪಾಕ್ ಮಾತುಕತೆ ಪುನಾರಂಭಗೊಂಡರಷ್ಟೇ ಗಡಿಯಲ್ಲಿ ದಾಳಿ ತಡೆಗಟ್ಟಲು ಸಾಧ್ಯ: ಫಾರೂಕ್
ಭಾರತ ಹಾಗೂ ಪಾಕಿಸ್ತಾನದ ನಡುವೆ ಮಾತುಕತೆ ಪುನಾರಂಭಗೊಂಡರಷ್ಟೇ ಗಡಿಯಲ್ಲಿ ನಡೆಯುತ್ತಿರುವ ಶೆಲ್ ದಾಳಿಗಳನ್ನು ತಡೆಗಟ್ಟಲು ಸಾಧ್ಯ ಎಂದು ಜಮ್ಮು-ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.
ಜಮ್ಮು: ಭಾರತ ಹಾಗೂ ಪಾಕಿಸ್ತಾನದ ನಡುವೆ ಮಾತುಕತೆ ಪುನಾರಂಭಗೊಂಡರಷ್ಟೇ ಗಡಿಯಲ್ಲಿ ನಡೆಯುತ್ತಿರುವ ಶೆಲ್ ದಾಳಿಗಳನ್ನು ತಡೆಗಟ್ಟಲು ಸಾಧ್ಯ ಎಂದು ಜಮ್ಮು-ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.
ಪಾಕಿಸ್ತಾನದಿಂದ ಗಡಿಯಲ್ಲಿ ನಿರಂತರ ದಾಳಿ ಹಾಗೂ ಕದನ ವಿರಾಮ ಉಲ್ಲಂಘನೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಫಾರೂಕ್ ಅಬ್ದುಲ್ಲಾ, ಉಭಯ ರಾಷ್ಟ್ರಗಳು ಶಾಂತಿಯ ಮಾತುಕತೆ ನಡೆಸದೇ ಇದ್ದರೆ ನಮ್ಮ ಗಡಿಯಿಂದಲೂ ದಾಳಿಯಾಗುವುದು ನಿಲ್ಲುವುದಿಲ್ಲ, ಪಾಕಿಸ್ತಾನದವರೂ ದಾಳಿ ನಡೆಸುವುದನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ.
ಜಮ್ಮು-ಕಾಶ್ಮೀರದ ವಿಷಯವಾಗಿ ಸಾಮಾನ್ಯವಾಗಿ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಲ್ಲಿರುವ ಫಾರೂಕ್ ಅಬ್ದುಲ್ಲಾ, ಇತ್ತೀಚಿನ ದಿನಗಳಲ್ಲಿ ಪಾಕಿಸ್ತಾನ ಗಡಿ ಪ್ರದೇಶದಲ್ಲಿ ನಡೆಸುತ್ತಿರುವ ಕದನ ವಿರಾಮ ಉಲ್ಲಂಘನೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.