ನವದೆಹಲಿ: ಫೆ.27 ರಂದು ಮೇಘಾಲಯ ಹಾಗೂ ನಾಗಾಲ್ಯಾಂಡ್ ನ ವಿಧಾನಸಭೆಗೆ ಮತದಾನ ನಡೆಯುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅಲ್ಲಿನ ಜನತೆಗೆ ಕರೆ ನೀಡಿದ್ದಾರೆ.
60 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಉಭಯ ರಾಜ್ಯಗಳ ಚುನಾವಣೆಯ ಬಗ್ಗೆ ಪ್ರಧಾನಿ ಟ್ವೀಟ್ ಮಾಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಮನವಿ ಮಾಡಿದ್ದಾರೆ. ಮಾ.03 ರಂದು ಮೇಘಾಲಯ ಹಾಗೂ ನಾಗಾಲ್ಯಾಂಡ್ ನ ವಿಧಾನಸಭಾ ಚುನಾವಣೆಯ ಫಲಿತಾಂಶ ಘೋಷಣೆಯಾಗಲಿದ್ದು, ಮತ್ತೊಂದು ಈಶಾನ್ಯ ರಾಜ್ಯ ತ್ರಿಪುರಾ ವಿಧಾನಸಭೆಗೆ ಫೆ.18 ರಂದು ಮತದಾನ ನಡೆದಿತ್ತು.