ಚೆನ್ನೈ: ಐಎನ್ ಎಕ್ಸ್ ಮೀಡಿಯಾ ಸಂಸ್ಥೆಯಲ್ಲಿ ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣ ಸಂಬಂಧ ಕೇಂದ್ರ ಮಾಜಿ ಸಚಿವ ಕಾರ್ತಿ ಚಿದಂಬರಂ ಅವರನ್ನು ಸಿಬಿಐ ಬಂಧಿಸಿದೆ.
ಲಂಡನ್ ನಿಂದ ವಾಪಸ್ ಆಗುತ್ತಿದ್ದರಂತೆ ಚೆನ್ನೈನ ವಿಮಾನ ನಿಲ್ದಾಣದಲ್ಲಿ ಕಾರ್ತಿ ಚಿದಂಬರ್ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ, ನಿನ್ನೆ ಕಾರ್ತಿ ಸಂಸ್ಥೆಯ ಸಿಎ ಭಾಸ್ಕರ್ ರಾಮನ್ ಅವರನ್ನು ಬಂಧಿಸಲಾಗಿತ್ತು.
ಐಎನ್ ಎಕ್ಸ್ ಮೀಡಿಯಾ ಭ್ರಷ್ಟಾಚಾರ ಹಾಗೂ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಉಲ್ಲಂಘಿಸಿದ ಆರೋಪ ಎದುರಿಸುತ್ತಿರುವ ಕಾರ್ತಿ ಚಿದಂಬರಂ ಅವರ ವಿರುದ್ಧ ಸಿಬಿಐ ಸಹ ಪ್ರಕರಣ ದಾಖಲಿಸಿಕೊಂಡಿತ್ತು. ಹಲವು ದಿನಗಳಿಂದ ಪ್ರಕರಣ ಸಂಬಂಧ ಕಾರ್ತಿ ಚಿದಂಬರಂ ಅವರ ವಿರುದ್ಧ ದಾಖಲಾಗಿದ್ದ ದೂರಿನ ಅನ್ವಯ ಹಲವು ಬಾರಿ ವಿಚಾರಣೆಗೆ ಒಳಗಾಗಿದ್ದರು.
ಕೇಂದ್ರದಲ್ಲಿ ಯುಪಿಎ ಸರ್ಕಾರವಿದ್ದಾಗ ಚಿದಂಬರಂ ಸಚಿವರಾಗಿದ್ದರು, ಈ ವೇಳೆ ಐಎನ್ ಎಕ್ಸ್ ಮೀಡಿಯಾ ಸಂಸ್ಥೆ ಹಗರಣ ನಡೆದಿತ್ತು. ಅಕ್ರಮ ಹಣ ವಹಿವಾಟು ತಡೆ ಕಾಯ್ದೆ ಅಡಿ ಕಾರ್ತಿ ಚಿದಂಬರಂ ವಿರುದ್ಧ ಇಡಿ ಮೇ, 2017ರಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆ ಉಲ್ಲಂಘನೆ ಆರೋಪದಲ್ಲಿ ಕಾರ್ತಿ ಚಿದಂರಬರಂ ನನ್ನು ಬಂಧಿಸಲಾಗಿದೆ.
2007ರಲ್ಲಿ ಮಾರಿಷಸ್‌ನಿಂದ ಬಂಡವಾಳ ಪಡೆಯುವ ವೇಳೆ ಎಫ್ಐಪಿಬಿ ನಿಯಮಾವಳಿ ಉಲ್ಲಂಘನೆ ಮಾಡಲಾಗಿರುವುದು ಕಂಡು ಬಂದ ಹಿನ್ನಲೆಯಲ್ಲಿ ಇ ಡಿ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿದಿದೆ. ಅಕ್ರಮ ಹಣ ವರ್ಗಾವಣೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಕಾರ್ತಿ ವಿರುದ್ಧ ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics