ದೇಶ

ಪರಿಕ್ಕರ್ ಅನುಪಸ್ಥಿತಿಯಿಂದಾಗಿ ಗೋವಾ ಸರ್ಕಾರ ನಿಷ್ಕ್ರಿಯವಾಗಿದೆ: ಕಾಂಗ್ರೆಸ್

Lingaraj Badiger
ಪಣಜಿ: ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಅನುಪಸ್ಥಿತಿಯಲ್ಲಿ ಆಡಳಿತಯಂತ್ರ ಸಂಪೂರ್ಣ ಕುಸಿದಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಆರೋಪಿಸಿದೆ.
ಪರಿಕ್ಕರ್ ಅವರು ಸಂಪೂರ್ಣ ಗುಣಮುಖರಾಗುವವರೆಗೆ ಸಮ್ಮಿಶ್ರ ಸರ್ಕಾರದ ಹಿರಿಯ ಸಚಿವರು ಮುಖ್ಯಮಂತ್ರಿಗಳ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಗೋವಾ ಕಾಂಗ್ರೆಸ್ ಅಧ್ಯಕ್ಷ ಶಾಂತಾರಾಮ್ ನಾಯಕ್ ಅವರು ಹೇಳಿದ್ದಾರೆ.
ರಾಜ್ಯದಲ್ಲಿ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾಗಿದ್ದು, ಫೆಬ್ರವರಿ 15ರಿಂದ ಪರಿಕ್ಕರ್ ಅನುಪಸ್ಥಿತಿಯಿಂದಾಗಿ ಆಡಳಿತಯಂತ್ರ ಸಂಪೂರ್ಣ ಕುಸಿದಿದೆ ಎಂದು ನಾಯಕ್ ಆರೋಪಿಸಿದ್ದಾರೆ.
ಇತ್ತಿಚೀಗಷ್ಟೇ ಮುಂಬೈನ ಲೀಲಾವತಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ ಪರಿಕ್ಕರ್‌(62) ಅವರನ್ನು ಕಳೆದ ಭಾನುವಾರ ಸಂಜೆ ಮತ್ತೆ ಗೋವಾ ಮೆಡಿಕಲ್‌ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ.
SCROLL FOR NEXT