ದೇಶ

20 ಆಪ್‌ ಶಾಸಕರ ಅನರ್ಹತೆ: ತೀರ್ಪು ಕಾಯ್ದಿರಿಸಿದ ದೆಹಲಿ ಹೈಕೋರ್ಟ್‌

Lingaraj Badiger
ನವದೆಹಲಿ: ಲಾಭದಾಯಕ ಹುದ್ದೆ ಹೊಂದಿದ್ದ ಆರೋಪದ ಮೇಲೆ ದೆಹಲಿ ಆಡಳಿತರೂಢ ಆಮ್ ಆದ್ಮಿ ಪಕ್ಷದ 20 ಶಾಸಕರನ್ನು ಅನರ್ಹಗೊಳಿಸಿದ್ದ ಚುನಾವಣಾ ಆಯೋಗದ ಕ್ರಮ ಪ್ರಶ್ನಿಸಿ ಆಪ್‌ ಶಾಸಕರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಬುಧವಾರ ಪೂರ್ಣಗೊಳಿಸಿದ ದೆಹಲಿ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ. 
ಅನರ್ಹತೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜೀವ್‌ ಖನ್ನಾ ಮತ್ತು ನ್ಯಾಯಮೂರ್ತಿ ಚಂದರ್‌ ಶೇಖರ್‌ ಅವರನ್ನೊಳಗೊಂಡ ಪೀಠ, ಆಪ್‌ ಶಾಸಕರು, ಚುನಾವಣಾ ಆಯೋಗ ಮತ್ತು ಇತರ ಸಂಬಂಧಿತ ಪಕ್ಷಗಳು ವಾದ-ಪ್ರತಿವಾದ ಮುಗಿಸಿದ ಬಳಿಕ ತೀರ್ಪನ್ನು ಕಾಯ್ದಿರಿಸಿದೆ.
ವಾದ-ಪ್ರತಿವಾದಗಳನ್ನು ಆಲಿಸಲಾಗಿದೆ ಮತ್ತು ತೀರ್ಪನ್ನು ಕಾದಿರಿಸಲಾಗಿದೆ ಎಂದು ಹೈಕೋರ್ಟ್ ಹೇಳಿದೆ.
ಆಮ್ ಆದ್ಮಿ ಪಕ್ಷದ 20 ಶಾಸಕರು ಸಂಸದೀಯ ಕಾರ್ಯದರ್ಶಿಯಾಗಿ ನೇಮಕಗೊಳ್ಳುವ ಮೂಲಕ ಲಾಭದಾಯಕ ಹುದ್ದೆ ಹೊಂದಿದ್ದು, ಅವರನ್ನು ಅನರ್ಹಗೊಳಿಸುವಂತೆ ಚುನಾವಣಾ ಆಯೋಗ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಿತ್ತು. ಬಳಿಕ ರಾಷ್ಟ್ರಪತಿ ರಾಮನಾಥ್ ಕೊವಿಂದ್ ಅವರು ಶಿಫಾರಸಿಗೆ ಸಹಿ ಹಾಕಿದ್ದರು.
SCROLL FOR NEXT