ರಂದೀಪ್ ಸುರ್ಜೆವಾಲಾ 
ದೇಶ

ಕಾರ್ತಿ ಚಿದಂಬರಂ ಬಂಧನ ಸೇಡಿನ ರಾಜಕೀಯ, ವಿಷಯಾಂತರ ತಂತ್ರ: ಕಾಂಗ್ರೆಸ್

ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರ ಬಂಧನ ಸೇಡಿನ ರಾಜಕೀಯ...

ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರ ಬಂಧನ ಸೇಡಿನ ರಾಜಕೀಯ ಮತ್ತು ಮೋದಿ ಸರ್ಕಾರ ತನ್ನ ಹಗರಣಗಳನ್ನು ಮುಚ್ಚಿಕೊಳ್ಳಲು ವಿಷಯಾಂತರ ತಂತ್ರ ಅನುಸರಿಸುತ್ತಿದೆ ಎಂದು ಬುಧವಾರ ಕಾಂಗ್ರೆಸ್ ಆರೋಪಿಸಿದೆ.
 ಐಎನ್ ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗೆ ಮಾಜಿ ಕೇಂದ್ರ ಸಚಿವ ಚಿದಂಬರಂ ಅವರ ಪುತ್ರ ಕಾರ್ತಿ ಅವರನ್ನು ಸಿಬಿಐ ಬಂಧಿಸಿದ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕ ರಂದೀಪ್ ಸುರ್ಜೆವಾಲಾ ಅವರು, ಕೇಂದ್ರ ಸರ್ಕಾರ ತನ್ನ ಭ್ರಷ್ಟಾಚಾರದ ಹಗರಣಗಳನ್ನು ಮತ್ತು ಕೆಟ್ಟ ಹಾಗೂ ದುರಾಡಳಿತವನ್ನು ಮುಚ್ಚಿಕೊಳ್ಳಲು ಮಾಡುತ್ತಿರುವ ತಂತ್ರ ಅಷ್ಟೆ ಎಂದಿದ್ದಾರೆ.
ಪಿ ಚಿದಂಬರಂ ಅಥವಾ ಅವರ ಪುತ್ರನ ವಿರುದ್ಧ ಬಿಜೆಪಿ ಸೇಡಿನ ರಾಜಕೀಯ ಮಾಡುತ್ತಿದ್ದು, ಇದಕ್ಕೆ ಕಾಂಗ್ರೆಸ್ ಹೆದರುವುದಿಲ್ಲ. ನಾವು ಸತ್ಯ ಹೇಳುವುದನ್ನು ಮುಂದುವರೆಸುತ್ತೇವೆ ಮತ್ತು ಮೋದಿ ಸರ್ಕಾರ ಹಗರಣಗಳನ್ನು ಬಯಲಿಗೆಳೆಯುವುದನ್ನು ನಿಲ್ಲಿಸುವುದಿಲ್ಲ ಎಂದು ಸುರ್ಜೆವಾಲಾ ಹೇಳಿದ್ದಾರೆ.
ಐಎನ್ ಎಕ್ಸ್ ಮೀಡಿಯಾ ಭ್ರಷ್ಟಾಚಾರ ಹಾಗೂ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಉಲ್ಲಂಘಿಸಿದ ಆರೋಪ ಎದುರಿಸುತ್ತಿರುವ ಕಾರ್ತಿ ಚಿದಂಬರಂ ಅವರ ವಿರುದ್ಧ ಸಿಬಿಐ ಕಳೆದ ವರ್ಷ ಮೇ 15ರಂದು ಎಫ್ಐಆರ್ ದಾಖಲಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ಹಲವು ಬಾರಿ ಸಮನ್ಸ್ ಜಾರಿ ಮಾಡಿದರೂ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿರುವ ಕಾರ್ತಿ ಚಿದಂಬರಂ ಅವರನ್ನು ಇಂದು ಬಂಧಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT