ನವದೆಹಲಿ: ಐಎನ್ ಎಕ್ಸ್ ಮೀಡಿಯಾ ಸಂಸ್ಥೆಯಲ್ಲಿ ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದ ಸಂಬಂಧ ಬಂಧನಕ್ಕೊಳಗಾಗಿರುವ ಕಾರ್ತಿ ಚಿದಂಬರಂ ಅವರನ್ನು ಸಿಬಿಐ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಗೆ ಹಾಜರುಪಡಿಸಲಾಗಿದ್ದು 15 ದಿನಗಳ ಕಾಲ ವಶಕ್ಕೆ ನೀಡುವಂತೆ ಕೋರ್ಟ್ ಗೆ ಮನವಿ ಮಾಡಿದೆ.
ಪಟಿಯಾಲ ಕೋರ್ಟ್ ನಲ್ಲಿ ಕಾರ್ತಿ ಚಿದಂಬರಂ ಪರವಾಗಿ ಅಭಿಶೇಕ್ ಮನು ಸಿಂಘ್ವಿ ವಾದ ಮಂಡಿಸಿದ್ದು, ಅಡ್ವಾನ್ಸ್ಡ್ ಸ್ಟ್ರಾಟಜಿಕ್ ಕನ್ಸಲ್ಟಿಂಗ್ ಲಿಮಿಟೆಡ್ ಗೂ ಕಾರ್ತಿ ಚಿದಂಬರಂ ಗೂ ಯಾವುದೇ ರೀತಿಯ ಸಂಬಂಧವಿಲ್ಲ ಪ್ರಕರಣಕ್ಕೆ ಸಂಬಂದ್ಖಿಸಿದಂತೆ ಇಡಿ ಹಾಗೂ ಸಿಬಿಐ ತನಿಖೆಗೆ ಯಾವಾಗಲೂ ಕಾರ್ತಿ ಚಿದಂಬರಂ ಸಹಕರಿಸಿದ್ದಾರೆ ಎಂದು ವಾದಿಸಿದ್ದಾರೆ.
ಕಾರ್ತಿ ಚಿದಂಬರಂ ವಿರುದ್ಧ ಆರೋಪಿಸಿರುವ ಸಿಬಿಐ, ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ವಿಚಾರಣೆಗೆ ಸಹಕರಿಸುತ್ತಿಲ್ಲ ಎಂದು ಹೇಳಿದೆ. ಅಷ್ಟೇ ಅಲ್ಲದೇ ಕಾರ್ತಿ ಚಿದಂಬರಂ ತಪ್ಪು ಹೇಳಿಕೆಗಳಿಂದ ತನಿಖೆಗೆ ಹಿನ್ನಡೆಯುಂಟಾಗುತ್ತಿದೆ ಎಂದು ಸಿಬಿಐ ಕೋರ್ಟ್ ಗೆ ತಿಳಿಸಿದ್ದು 15 ದಿನಗಳ ಕಾಲ ಕಸ್ಟಡಿಗೆ ಒಪ್ಪಿಸಬೇಕೆಂದು ಮನವಿ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics