ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಸಹಕರಿಸಲು ಅಭರಣ ಉದ್ಯಮಿ ನೀರವ್ ಮೋದಿ ತಿರಸ್ಕರಿಸಿದ್ದಾನೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.
ಪಂಜಾಬ್ ನ್ಯಾಷನಲ್ ಬ್ಯಾಂಕಿನ 11.400 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಎದುರು ವಿಚಾರಣೆಗೆ ಹಾಜರಾಗುವಂತೆ ಇ-ಮೇಲ್ ಮೂಲಕ ತಿಳಿಸಲಾಗಿತ್ತು.
ಆದರೆ, ತಾನೂ ವ್ಯವಹಾರ ದೃಷ್ಟಿಯಿಂದ ವಿದೇಶದಲ್ಲಿದ್ದು, ತನಿಖೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾನೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ನೀರವ್ ಮೋದಿ ಯಾವ ದೇಶದಲ್ಲಿದ್ದಾನೋ ಆ ದೇಶದಲ್ಲಿನ ಭಾರತೀಯ ರಾಯಬಾರಿ ಅಧಿಕಾರಿಗಳನ್ನು ಸಂಪರ್ಕಿಸುವಂತೆ ನಿರ್ದೇಶಿಸಲಾಗಿದೆ.
ಆತಭಾರತಕ್ಕೆ ಮರಳಲು ವ್ಯವಸ್ಥೆ ಮಾಡಲಾಗುವುದು ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.