ಗುಜರಾತ್ ಪಟಿದಾರ್ ಅನಾಮತ್ ಆಂದೋಲನ ಸಮಿತಿ ಮುಖಂಡ ಹಾರ್ದಿಕ್ ಪಟೇಲ್
ಅಹಮದಾಬಾದ್: ಸಮಯ ಬಂದಾಗ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆಂದು ಗುಜರಾತ್ ಪಟಿದಾರ್ ಅನಾಮತ್ ಆಂದೋಲನ ಸಮಿತಿ ಮುಖಂಡ ಹಾರ್ದಿಕ್ ಪಟೇಲ್ ಅವರು ಬುಧವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಭವಿಷ್ಯದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. 2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಈಗಾಗಲೇ ನನಗೆ ಕಾಂಗ್ರೆಸ್ ಪಕ್ಷದಿಂದ ಆಹ್ವಾನ ಬಂದಿದೆ. ಸಮಯ ಬಂದಾಗ ನಾನು ಖಂಡಿತವಾಗಿಯೂ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆಂದು ಹೇಳಿದ್ದಾರೆ.
ಕೇವಲ ಹೆಸರಿಗೆ ಮಾತ್ರ ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಜನರ ಸಮಸ್ಯೆಗಳ ಕುರಿತು ದನಿ ಎತ್ತುವ ಸಲುವಾಗಿ ಸ್ಪರ್ಧಿಸುತ್ತೇನೆಂದು ತಿಳಿಸಿದ್ದಾರೆ.
2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ನಡೆಸುವಂತೆ ಹಲವು ಕಾಂಗ್ರೆಸ್ ನಾಯಕರು ನನ್ನೊಂದಿಗೆ ಮಾತನಾಡಿದ್ದಾರೆ. ಗುಜರಾತ್ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಆಹ್ವಾನ ನೀಡಿದ್ದರು. ಆದರೆ, ನಾನು ವಯಸ್ಸಿನ ಕಾರಣದಿಂದ ಸಮಯ ಬಂದಾಗ ಸ್ಪರ್ಧಿಸುತ್ತೇನೆಂದು ಹೇಳಿದ್ದೇನೆ. 2019ರ ವೇಳೆ ನನಗೆ 25 ವರ್ಷ ವಯಸ್ಸಾಗಿರುತ್ತದೆ. ಆಗ ಖಂಡಿತವಾಗಿಯೂ ನಾನು ಸ್ಪರ್ಧಿಸುತ್ತೇನೆಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics