ಸೇನಾ ಮುಖ್ಯಸ್ಥ ಬಿಪಿನ್ ರಾವತ್ 
ದೇಶ

ಸರ್ಕಾರ ತಲುಪಲು ಸಾಧ್ಯವಿಲ್ಲದ ಪ್ರದೇಶಗಳಲ್ಲಿ ಸೇನೆ ಕಲ್ಯಾಣ ಸೇವೆಗಳನ್ನು ಮಾಡುತ್ತಿದೆ: ಸೇನಾ ಮುಖ್ಯಸ್ಥ ರಾವತ್

ಸರ್ಕಾರ ಕೂಡ ತಲುಪಲು ಸಾಧ್ಯವಿಲ್ಲದ ಪ್ರದೇಶಗಳಲ್ಲಿ ಭಾರತೀಯ ಸೇನೆ ಶಿಕ್ಷಣ, ಆರೋಗ್ಯ ಸೇರಿದಂತೆ ಇತರೆ ಕಲ್ಯಾಣ ಸೇವೆಗಳನ್ನು ಮಾಡುತ್ತಿದೆ ಎಂದು ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು ಗುರುವಾರ ಹೇಳಿದ್ದಾರೆ...

ನವದೆಹಲಿ: ಸರ್ಕಾರ ಕೂಡ ತಲುಪಲು ಸಾಧ್ಯವಿಲ್ಲದ ಪ್ರದೇಶಗಳಲ್ಲಿ ಭಾರತೀಯ ಸೇನೆ ಶಿಕ್ಷಣ, ಆರೋಗ್ಯ ಸೇರಿದಂತೆ ಇತರೆ ಕಲ್ಯಾಣ ಸೇವೆಗಳನ್ನು ಮಾಡುತ್ತಿದೆ ಎಂದು ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು ಗುರುವಾರ ಹೇಳಿದ್ದಾರೆ. 
ದೇಶ ಕಟ್ಟಲು ಸೇನಾ ಪಡೆಗಳ ಕೊಡುಗೆ ಕುರಿತು ವಿಚಾರಗೋಷ್ಠಿಯಲ್ಲಿ ಮಾತನಾಡಿರುವ ಅವರು, ಸರ್ಕಾರ ತಲುಪಲು ಸಾಧ್ಯವಿಲ್ಲದ ದೂರದ ಪ್ರದೇಶಗಳಲ್ಲಿ ಸೇನೆ ಶಿಕ್ಷಣ ಹಾಗೂ ಆರೋಗ್ಯ ಸೇವೆಗಳನ್ನು ನೀಡುತ್ತಿದ್ದು, ಅಲ್ಲಿನ ಜನರು ಸೇನಾಪಡೆಗಳ ಮೇಲೆಯೇ ಅವಲಂಬಿತರಾಗಿದ್ದಾರೆಂದು ಹೇಳಿದ್ದಾರೆ. 
ಸೇನಾಪಡೆಗಳನ್ನು ನಿಯೋಜಿಸಿರುವ ಸ್ಥಳಗಳಲ್ಲಿ ಸ್ಥಳೀಯರ ಉತ್ಪನ್ನಗಳನ್ನು ಬಳಕೆಗಾಗಿ ಖರೀದಿ ಮಾಡಲಾಗುತ್ತದೆ. ಬಳಿಕ ಅವರಿಗೆ ಹಣವನ್ನು ನೀಡಲಾಗುತ್ತದೆ. ಸೇನೆ ದೇಶಕ್ಕಾಗಿ ಹಲವಾರು ಸೇವೆಗಳನ್ನು ಮಾಡುತ್ತಿದೆ. ಸೇನೆಯಲ್ಲಿರುವ ಪ್ರತೀಯೊಬ್ಬ ಯೋಧ ಕೂಡ ತೆರಿಗೆಯನ್ನು ಕಟ್ಟುತ್ತಿದ್ದು, ಮೂಲದಲ್ಲೇ ಆ ಹಣವನ್ನು ತೆಗೆದುಕೊಳ್ಳಲಾಗುತ್ತಿದೆ. ವೇತನವನ್ನು ಪಡೆಯುವ ವೇಳೆ ನಾವು ತೆರಿಗೆಯನ್ನು ಕಟ್ಟುತ್ತೇವೆ. ಆ ತೆರಿಗೆ ಆಯಾ ರಾಜ್ಯಗಳಿಗೆ ಹೋಗುತ್ತದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೈಸೂರು ರಾಜಮನೆತನ ಹೊರಗಿಟ್ಟು ಕರ್ನಾಟಕ ಇತಿಹಾಸ ಊಹಿಸುವುದು ಕಷ್ಟ': ಗವಿಸಿದ್ಧೇಶ್ವರ ಶ್ರೀಗಳು; Video

'ಮೊದಲು ನಿಮ್ಮ ಅಮೆರಿಕದಲ್ಲಿ ಕೈಗೆಟುಕುವ ದರದಲ್ಲಿ ಸೇವೆ ಒದಗಿಸಿ': ಒತ್ತಡಕ್ಕೆ ಭಾರತ ಮಣಿಯಲ್ಲ; ಎಲಾನ್ ಮಸ್ಕ್ ವಿರುದ್ಧ ನಿಶಿಕಾಂತ್ ದುಬೆ

'ನನ್ನನ್ನಲ್ಲ, ನಿಮ್ ಗಂಡನ ಗುರಾಯಿಸಿ', ಜಯಾ ಬಚ್ಚನ್‌ ಖಡಕ್ ನೋಟಕ್ಕೆ ಫೋಟೋಗ್ರಾಫರ್ ತಿರುಗೇಟು! Video

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ