ಸಂಗ್ರಹ ಚಿತ್ರ 
ದೇಶ

'ವಿಶೇಷ ಆಹ್ವಾನಿತ'ನಾಗಿ ಲೋಕಪಾಲ್ ಸಭೆಗೆ ಬರುವುದಿಲ್ಲ: ಪ್ರಧಾನಿಗೆ ಮಲ್ಲಿಕಾರ್ಜುನ ಖರ್ಗೆ ಪತ್ರ

ಲೋಕಪಾಲ ಆಯ್ಕೆ ಸಮಿತಿ ಸಭೆಗೆ ಹಾಜರಾಗುವಂತೆ ನೀಡಲಾಗಿದ್ದ ಆಹ್ವಾನವನ್ನು ಲೋಕಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ತಿರಸ್ಕರಿಸಿದ್ದಾರೆ.

ನವದೆಹಲಿ: ಲೋಕಪಾಲ ಆಯ್ಕೆ ಸಮಿತಿ ಸಭೆಗೆ ಹಾಜರಾಗುವಂತೆ ನೀಡಲಾಗಿದ್ದ ಆಹ್ವಾನವನ್ನು ಲೋಕಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ತಿರಸ್ಕರಿಸಿದ್ದಾರೆ.
ಮೂಲಗಳ ಪ್ರಕಾರ ಈ ಸಭೆಗೆ ವಿಶೇಷ ಆಹ್ವಾನಿತರಾಗಿ ಬರುವಂತೆ ಪ್ರಧಾನಿ ಮೋದಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಹ್ವಾನ ನೀಡಿದ್ದರು. ಆದರೆ  ಪ್ರಸ್ತುತ ಮಲ್ಲಿಕಾರ್ಜುನ ಖರ್ಗೆ ಸಭೆಗೆ ಹಾಜರಾಗದೇ ಇರಲು ತೀರ್ಮಾನಿಸಿದ್ದಾರೆ.
ಆದರೆ ಸಭೆಯಲ್ಲಿ ತಮಗೆ ವಿಶೇಷ ಆಹ್ವಾನಿತನ ಸ್ಥಾನ ನೀಡಲಾಗಿದೆಯಷ್ಟೆ. ಹೀಗಾಗಿ ಡಮ್ಮಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದರೆ ಅದನ್ನು ವಿರೋಧಿಸುವ ಅಧಿಕಾರ ತಮಗೆ ಇರುವುದಿಲ್ಲ. ಹೀಗಾಗಿ ಸಭೆಯಲ್ಲಿ ಭಾಗವಹಿಸದೇ ಇರಲು ಖರ್ಗೆ ತೀರ್ಮಾನಿಸಿದ್ದಾರೆ ಎನ್ನಲಾಗಿದೆ. 
ಭ್ರಷ್ಟಾಚಾರ ನಿಗ್ರಹಕ್ಕೆ ಲೋಕಪಾಲ ನೇಮಕ ಆಯ್ಕೆ ನಿರ್ಣಾಯಕವಾಗಿದ್ದು, ಇಂತಹ ಮಹತ್ವದ ಹುದ್ದೆಗೆ ಅರ್ಹರನ್ನು ನೇಮಕ ಮಾಡುವಾಗ ಪ್ರತಿಪಕ್ಷಗಳನ್ನು ಗಣನೆಗೆ ತೆಗೆದುಕೊಳ್ಳುವುದ ಅನಿವಾರ್ಯ. ಆದರೆ ಮೋದಿ ಸರ್ಕಾರ ನಾಮ್ ಕೆ ವಾಸ್ತೆ ಎಂಬಂತೆ ಖರ್ಗೆ ಅವರನ್ನು ವಿಶೇಷ ಆಹ್ವಾನಿತರಾಗಿ ಆಹ್ವಾನಿಸಿದೆ. ಆ ಮೂಲಕ ಪ್ರತಿಪಕ್ಷಗಳಿಲ್ಲದೇ ಲೋಕಪಾಲ ಆಯ್ಕೆ ಮಾಡುವುದು ಕೇಂದ್ರ ಸರ್ಕಾರದ ಹುನ್ನಾರವಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಇನ್ನು ಸಭೆಯಲ್ಲಿ ಮೋದಿ ಜತೆಗೆ ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಪಾಲ್ಗೊಳ್ಳಲ್ಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಬಿಗ್ ಶಾಕ್‌; ಇಬ್ಬರಿಗೂ ಕೋರ್ಟ್ ಸಮನ್ಸ್

ಉತ್ತರ ಪ್ರದೇಶ ಚುನಾವಣೆಗೂ ಮುನ್ನ ಅಖಿಲೇಶ್ ಯಾದವ್'ಗೆ ಬಿಗ್ ಶಾಕ್; BJP ಸೇರಲಿದ್ದಾರೆ SPಯ ಮೂವರು ಶಾಸಕರು!

ಜಿಎಸ್‌ಟಿ ಮಂಡಳಿಯಿಂದ ಪ್ರಕ್ರಿಯೆ ಸುಧಾರಣೆಗಳಿಗೆ ಅನುಮೋದನೆ; ಬಂಧನದ ಅಧಿಕಾರಕ್ಕೆ ಕಡಿವಾಣ!

ಶಿಕಾರಿಪುರದ ಈ ಗ್ರಾಮದಲ್ಲಿ ಬೀಗರೂಟ ಹಾಕಿದ್ರೆ ₹1 ಲಕ್ಷ, ಉಂಡು ಬಂದ್ರೆ ₹50 ಸಾವಿರ ದಂಡ! ಇಲ್ಲಿದೆ ಸ್ಫೋಟಕ ಕಾರಣ...