ದೇಶ

ಐಎನ್ಎಕ್ಸ್ ಮೀಡಿಯಾ ಪ್ರಕರಣ: ಮಾರ್ಚ್ 6 ರವರೆಗೆ ಕಾರ್ತಿ ಚಿದಂಬರಂ ಸಿಬಿಐ ವಶಕ್ಕೆ

Vishwanath S
ನವದೆಹಲಿ: ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣ ಸಂಬಂಧ ಮಾಜಿ ಕೇಂದ್ರ ಸಚಿವ ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಅವರನ್ನು ಮಾರ್ಚ್ 6ರವರೆಗೆ ಸಿಬಿಐ ವಶಕ್ಕೆ ನೀಡಲಾಗಿದೆ. 
ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ತಿ ಚಿದಂಬರಂ ಅವರನ್ನು ಬಂಧಿಸಿದ್ದ ಸಿಬಿಐ ಇಂದು ದೆಹಲಿ ಪಟಿಯಾಲ ಕೋರ್ಟ್ ಮುಂದೆ ಹಾಜರುಪಡಿಸಿದ್ದು ಈ ವೇಳೆ ಸಿಬಿಐ ಹೆಚ್ಚುವರಿ ವಿಚಾರಣೆಗಾಗಿ 15 ದಿನಗಳ ಕಾಲ ತಮ್ಮ ವಶಕ್ಕೆ ನೀಡಬೇಕು ಎಂದು ಮನವಿ ಮಾಡಿದ್ದರು. 
ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ವಿಚಾರಣೆಗೆ ಸಹಕರಿಸುತ್ತಿಲ್ಲ. ಅಷ್ಟೇ ಅಲ್ಲದೇ ಕಾರ್ತಿ ಚಿದಂಬರಂ ತಪ್ಪು ಹೇಳಿಕೆಗಳಿಂದ ತನಿಖೆಗೆ ಹಿನ್ನಡೆಯುಂಟಾಗುತ್ತಿದೆ ಎಂದು ಸಿಬಿಐ ಕೋರ್ಟ್ ಗೆ ತಿಳಿಸಿದ್ದು 15 ದಿನಗಳ ಕಾಲ ಕಸ್ಟಡಿಗೆ ನೀಡಬೇಕು ಎಂದು ಮನವಿ ಮಾಡಿತ್ತು. ಇದಕ್ಕೆ ವಿಶೇಷ ನ್ಯಾಯಧೀಶರಾದ ಸುನೀಲ್ ರಾಣಾ ಅವರು 15 ದಿನಗಳ ಬದಲಾಗಿ 6 ದಿನಗಳ ಕಾಲ ಸಿಬಿಐ ವಶಕ್ಕೆ ನೀಡಿ ಆದೇಶ ನೀಡಿದ್ದಾರೆ. 
ಐಎನ್ ಎಕ್ಸ್ ಮೀಡಿಯಾ ಭ್ರಷ್ಟಾಚಾರ ಹಾಗೂ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಉಲ್ಲಂಘಿಸಿದ ಆರೋಪ ಎದುರಿಸುತ್ತಿರುವ ಕಾರ್ತಿ ಚಿದಂಬರಂ ಅವರ ವಿರುದ್ಧ ಸಿಬಿಐ ಕಳೆದ ವರ್ಷ ಮೇ 15ರಂದು ಎಫ್ಐಆರ್ ದಾಖಲಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ಹಲವು ಬಾರಿ ಸಮನ್ಸ್ ಜಾರಿ ಮಾಡಿದರೂ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿರುವ ಕಾರ್ತಿ ಚಿದಂಬರಂ ಅವರನ್ನು ಬಂಧಿಸಿತ್ತು.
SCROLL FOR NEXT