ಮುಖ್ತಾರ್ ಅಬ್ಬಾಸ್ ನಖ್ವಿ 
ದೇಶ

ತ್ರಿವಳಿ ತಲಾಖ್ ಬಗ್ಗೆ ಕಾಂಗ್ರೆಸ್ ಗೆ ಗೊಂದಲ ಇದೆ: ಮುಖ್ತಾರ್ ಅಬ್ಬಾಸ್ ನಖ್ವಿ

ತ್ರಿವಳಿ ತಲಾಖ್ ಮಸೂದೆ ಬಗ್ಗೆ ಕಾಂಗ್ರೆಸ್ ಗೊಂದಲದ ನಿಲುವು ತಾಳಿದೆ. ಆದರೆ ಮಸೂದೆ ಬಗ್ಗೆ ಮುಸ್ಲಿಂ ಮಹಿಳೆಯರು ಖುಷಿಯಾಗಿದ್ದರೂ ಕಾಂಗ್ರೆಸ್ ಯಾಕೆ.....

ನವದೆಹಲಿ: ತ್ರಿವಳಿ ತಲಾಖ್ ಮಸೂದೆ ಬಗ್ಗೆ ಕಾಂಗ್ರೆಸ್ ಗೊಂದಲದ ನಿಲುವು ತಾಳಿದೆ. ಆದರೆ ಮಸೂದೆ ಬಗ್ಗೆ ಮುಸ್ಲಿಂ ಮಹಿಳೆಯರು ಖುಷಿಯಾಗಿದ್ದರೂ ಕಾಂಗ್ರೆಸ್ ಯಾಕೆ ಬೇಸರಗೊಂಡಿದೆ ಎಂಬುದು ಗೊತ್ತಾಗಬೇಕು ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್‌ ನಖ್ವಿ ಅವರು ಮಂಗಳವಾರ ಹೇಳಿದ್ದಾರೆ.
ಇಂದು ತ್ರಿವಳಿ ತಲಾಖ್‌ ನಿಷೇಧಿಸುವ ‘ಮುಸ್ಲಿಂ ಮಹಿಳೆಯರ (ವೈವಾಹಿಕ ಹಕ್ಕುಗಳ ಸಂರಕ್ಷಣೆ) ಮಸೂದೆ– 2017’ರಾಜ್ಯಸಭೆಯಲ್ಲಿ ಮಂಡನೆಯಾಗಿದ್ದು, ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ನಖ್ವಿ, ಇತ್ತೀಚಿನ ದಿನಗಳಲ್ಲಿ ಎನ್ ಡಿಎ ಸರ್ಕಾರ ಹಲವು ಸುಧಾರಣೆಗಳನ್ನು ತರುತ್ತಿದೆ. ಅದರಲ್ಲಿ ತ್ರಿವಳಿ ತಲಾಖ್ ಸಹ ಒಂದು ಎಂದರು.
ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ, ಕಾಂಗ್ರೆಸ್ ಒಂದು ಹೆಜ್ಜೆ ಮುಂದಿಟ್ಟರೆ 10 ಹೆಜ್ಜೆ ಹಿಂದಿಡುತ್ತದೆ. ತ್ರಿವಳಿ ತಲಾಖ್ ಬಗ್ಗೆ ಕಾಂಗ್ರೆಸ್ ಗಲಿಬಿಲಿಗೊಂಡಿದೆ. ತ್ರಿವಳಿ ತಲಾಖ್ ನಿಂದಾಗಿ ಮುಸ್ಲಿಂ ಮಹಿಳೆಯರು ಖುಷಿಯಾಗಿದ್ದಾರೆ. ಆದರೆ ಕಾಂಗ್ರೆಸ್ ಗೆ ಏಕೆ ಬೇಸರವಾಗಿದೆ ಗೊತ್ತಿಲ್ಲ ಎಂದರು.
ಈಗಗಾಲೇ ಲೋಕಸಭೆಯಲ್ಲಿ ಅಂಗೀಕಾರಗೊಂಡಿರುವ ತ್ರಿವಳಿ ತಲಾಖ್ ಮಸೂದೆ ಇಂದು ರಾಜ್ಯಸಭೆಯಲ್ಲಿ ಮಂಡನೆಯಾಗಿದ್ದು, ಚರ್ಚೆ ನಡೆಯುತ್ತಿದೆ.
ಲೋಕಸಭೆಯಲ್ಲಿ ತ್ರಿವಳಿ ತಲಾಖ್ ಮಸೂದೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಕಾಂಗ್ರೆಸ್ ಹಾಗೂ ಇತರೆ ಕೆಲ ಪ್ರತಿಪಕ್ಷಗಳು, ಮಸೂದೆಯನ್ನು ಸ್ಥಾಯಿ ಸಮಿತಿಗೆ ಕಳುಹಿಸಬೇಕು ಎಂದು ಒತ್ತಾಯಿಸಿದ್ದವು. ಆದರೆ ಕೇಂದ್ರ ಸರ್ಕಾರ ಪ್ರತಿಪಕ್ಷಗಳ ಬೇಡಿಕೆಯನ್ನು ತಿರಸ್ಕರಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!