ರಾಯ್ ಪುರ್: ಛತ್ತೀಸ್ ಗಢದ ನಾರಾಯಣ್ ಪುರ ಜಿಲ್ಲೆಯಲ್ಲಿ 8 ನಕ್ಸಲರನ್ನು ಬಂಧಿಸಲಾಗಿದ್ದು, ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಇಂಡೋ ಟಿಬೇಟಿಯನ್ ಗಡಿ ಪೊಲೀಸ್ ಪಡೆಗಳು ಹಾಗೂ ಜಿಲ್ಲಾ ಮೀಸಲು ಗಾರ್ಡ್ ಜಂಟಿ ಕಾರ್ಯಾಚರಣೆಯಲ್ಲಿ ನಕ್ಸಲರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಎಸ್ ಪಿ ಸಂತೋಷ್ ಸಿಂಗ್ ತಿಳಿಸಿದ್ದಾರೆ. ಬಂಧಿತ ನಕ್ಸಲರು ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದರು ಎಂದು ತಿಳಿದುಬಂದಿದೆ.
6 ಅತ್ಯಾಧುನಿಕ ಗನ್ ಗಳು, ಎಲೆಕ್ಟ್ರಿಕ್ ವೈರ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.