ದೇಶ

ಜಗನ್ಮೋಹನ್ ರೆಡ್ಡಿಯ 117.74 ಕೋಟಿ ರು.ಮೌಲ್ಯದ ಆಸ್ತಿ ಜಪ್ತಿ

Lingaraj Badiger
ನವದೆಹಲಿ: ಅಕ್ರಮ ಹಣ ವಹಿವಾಟು ಪ್ರಕರಣಕ್ಕೆ ಸಂಬಂದಿಸಿದಂತೆ ವೈಎಸ್ ಆರ್ ಕಾಂಗ್ರೆಸ್ ಮುಖ್ಯಸ್ಥ ಜಗನ್ಮೋಹನ್ ರೆಡ್ಡಿಗೆ ಸೇರಿದ 117.74 ಕೋಟಿ ರುಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿರುವುದಾಗಿ ಜಾರಿ ನಿರ್ದೇಶನಾಲಯ ಬುಧವಾರ ತಿಳಿಸಿದೆ.
ಅಕ್ರಮ ಹಣ ವಹಿವಾಟು ತಡೆ ಕಾಯ್ದೆಯಡಿ ವೈಎಸ್ ಜಗನ್ಮೋಹನ್ ರೆಡ್ಡಿಗೆ ಸಂಬಂಧಿಸಿದ 117.74 ಕೋಟಿ ರುಪಾಯಿ ಮೌಲ್ಯದ ಚರಾ ಮತ್ತು ಸ್ಥಿರಾಸ್ತಿಯ ಜಪ್ತಿಗೆ ಜಾರಿ ನಿರ್ದೇಶನಾಲಯದ ಹೈದರಾಬಾದ್ ವಲಯ ಕಚೇರಿ ಆದೇಶ ಹೊರಡಿಸಿದೆ.
ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಗನ್ ವಿರುದ್ಧ ಸಿಬಿಐ ದಾಖಲಿಸಿದ್ದ ಎಫ್ಐಆರ್ ಆಧರಿಸಿ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ.
ಬೇನಾಮಿ ಕಂಪನಿಗಳನ್ನು ಸ್ಥಾಪಿಸಲು ಲಂಚ ಪಡೆದ ಆರೋಪ ಜಗನ್ ಮೇಲಿದೆ. ರಾಜಶೇಖರ್ ರೆಡ್ಡಿ ಅವರು ಮುಖ್ಯಮಂತ್ರಿ ಆಗಿದ್ದ ಕಾಲದಲ್ಲಿ ಈ ಎಲ್ಲಾ ಅವ್ಯವಹಾರ ನಡೆದಿದೆ ಎಂದು ಎಫ್ಐಆರ್ ನಲ್ಲಿ ಆರೋಪಿಸಲಾಗಿದೆ.
SCROLL FOR NEXT