ರಾಮ್ ಗೋಪಾಲ್ ವರ್ಮಾ 
ದೇಶ

ರಜಿನಿಕಾಂತ್‌ರಂತೆ ಮಾಡದಿದ್ರೆ ಪವನ್ ಕಲ್ಯಾಣ್ ಚೀಪ್ ಆಗ್ಬಿಡ್ತಾರೆ: ರಾಮ್ ಗೋಪಾಲ್ ವರ್ಮಾ

ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅವರು ತಮಿಳುನಾಡಿನಲ್ಲಿ ಪ್ರತಿ ಕ್ಷೇತ್ರದಿಂದಲೂ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸೂಚನೆ ನೀಡಿದ್ದು ಅದೇ ರೀತಿ...

ಚೆನ್ನೈ: ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅವರು ತಮಿಳುನಾಡಿನಲ್ಲಿ ಪ್ರತಿ ಕ್ಷೇತ್ರದಿಂದಲೂ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸೂಚನೆ ನೀಡಿದ್ದು ಅದೇ ರೀತಿ ತೆಲುಗು ನಟ ಪವನ್ ಕಲ್ಯಾಣ್ ಸಹ ಆಂಧ್ರದಲ್ಲಿ ಮಾಡುತ್ತಾರೆ ಎಂಬ ಭರವಸೆ ಇದೆ ಎಂದು ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಹೇಳಿದ್ದಾರೆ. 
ಈ ಬಗ್ಗೆ ಟ್ವೀಟ್ ಮಾಡಿರುವ ರಾಮ್ ಗೋಪಾಲ್ ವರ್ಮಾ, ರಜನಿಕಾಂತ್ ರಾಜಕೀಯದಲ್ಲಿ ಸಕ್ರಿಯರಾಗಿದ್ದು ಮುಂಬರುವ ತಮಿಳುನಾಡಿನ ವಿಧಾನಸಭೆಯಲ್ಲಿ ಪ್ರತಿಯೊಂದು ಕ್ಷೇತ್ರದಿಂದಲೂ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸಿದ್ದು ಅದೇ ರೀತಿ ಆಂಧ್ರದಲ್ಲಿ ಪವನ್ ಕಲ್ಯಾಣ್ ಸಹ ಮಾಡುತ್ತಾರೆ ಎಂಬ ಭರವಸೆ ಇದೆ ಎಂದು ಟ್ವೀಟಿಸಿದ್ದಾರೆ.
ಮತ್ತೊಂದು ಟ್ವೀಟ್ ನಲ್ಲಿ ಆಂಧ್ರದ ಪ್ರತಿಯೊಂದು ಕ್ಷೇತ್ರದಿಂದಲೂ ಪವನ್ ಕಲ್ಯಾಣ್ ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸದಿದ್ದರೆ. ಅವರ ಅಭಿಮಾನಿಗಳು ಮತ್ತು ತೆಲುಗು ಜನರಿಗೆ ಪವನ್ ಕಲ್ಯಾಣ್, ರಜನಿಕಾಂತ್ ರಂತೆ ಸೂಪರ್ ಸ್ಟಾರ್ ಅಲ್ಲ, ಅವರು ಬರೀ ಒಬ್ಬ ನಟ ಎಂಬ ಭಾವನೆ ಬರುತ್ತದೆ ಎಂದು ಟ್ವೀಟಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!