ಮಲ್ಲಿಕಾರ್ಜುನ ಖರ್ಗೆ 
ದೇಶ

ಭೀಮ ಕೋರೆಗಾಂವ್ ಹಿಂಸಾಚಾರದ ಹಿಂದೆ ಆರ್‏ಎಸ್ಎಸ್ ಕೈವಾಡ: ಮಲ್ಲಿಕಾರ್ಜುನ ಖರ್ಗೆ ಆರೋಪ

ಭೀಮ್ ಕೋರೆಗಾಂವ್ ಹಿಂಸಾಚಾರ ಪ್ರಕರಣ ಲೋಕಸಭೆಯಲ್ಲೂ ಪ್ರತಿಧ್ವನಿಸಿದ್ದು ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಈ ಹಿಂಸಾಚಾರದ ಹಿಂದೆ..

ನವದೆಹಲಿ: ಭೀಮ್ ಕೋರೆಗಾಂವ್ ಹಿಂಸಾಚಾರ ಪ್ರಕರಣ ಲೋಕಸಭೆಯಲ್ಲೂ ಪ್ರತಿಧ್ವನಿಸಿದ್ದು ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಈ ಹಿಂಸಾಚಾರದ ಹಿಂದೆ ರಾಷ್ಟ್ರೀಯ ಸ್ವಯಂಸೇವಾ ಸಂಘ (ಆರ್‏ಎಸ್ಎಸ್) ಕೈವಾಡವಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. 
ಲೋಕಸಭೆಯಲ್ಲಿ ಹಿಂಸಾಚಾರದ ಬಗ್ಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು ಭಾರತದಲ್ಲಿ ದಲಿತರ ಮೇಲೆ ಅತ್ಯಾಚಾರ ನಡೆಯುತ್ತಿದೆ. ಮಹಾರಾ, ಮರಾಠರ ಮಧ್ಯೆ ವಿಷ ಬೀಜ ಬಿತ್ತಲಾಗುತ್ತಿದೆ. ಬಿಜೆಪಿ ಆಡಳಿತದಲ್ಲಿರುವ ಪ್ರದೇಶಗಳಲ್ಲೇ ಹೆಚ್ಚು ಹಿಂಸಾಚಾರಗಳು ನಡೆಯುತ್ತಿವೆ. ಭೀಮ್ ಕೋರೆಗಾಂವ್ ಹಿಂಸಾಚಾರಕ್ಕೆ ಮಹಾರಾಷ್ಟ್ರ ಸರ್ಕಾರವೇ ನೇರ ಹೊಣೆ. ಸುರ್ಪೀಂಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯಬೇಕು. ಹಿಂಸಾಚಾರಕ್ಕೆ ಕಾರಣರಾದವನ್ನು ಹಿಡಿದು ಶಿಕ್ಷಿಸಬೇಕು ಎಂದು ಹೇಳಿದರು.
ಇನ್ನು ಹಿಂಸಾಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಸದನಕ್ಕೆ ಉತ್ತರಿಸಬೇಕು. ಈ ವಿಷಯವಾಗಿ ಅವರು ಮೌನವಾಗಿ ಕೂರಬಾರದು ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಪಟ್ಟು ಹಿಡಿದರು. ಇದಕ್ಕೆ ಕೇಂದ್ರ ಸಚಿವ ಅನಂತ್ ಕುಮಾರ್ ಅವರು ಪ್ರತಿಕ್ರಿಯಿಸಿದ್ದು ಪುಣೆ ಹಿಂಚಾಸಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು. ಈ ವೇಳೆ ಸದನದಲ್ಲಿ ಗದ್ದಲ, ಕೋಲಾಹಲ ಸೃಷ್ಠಿಯಾಗಿದ್ದರಿಂದ ಸ್ಪೀಕರ್ ಸುಮಿತ್ರ ಮಹಾಜನ್ ಅವರು ಸದವನ್ನು 2 ಗಂಟೆಗೆ ಮುಂದೂಡಲಾಯಿತು.
ಪುಣೆಯಲ್ಲಿ ನಡೆದ ಭೀಮಾ ಕೊರೆಗಾಂವ್ ಯುದ್ಧದ 200ನೇ ವರ್ಷದ ಕಾರ್ಯಕ್ರಮದ ವೇಳೆ ಕಲ್ಲು ತೂರಾಟ ನಡೆದಿದ್ದು ನಂತರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ದಲಿತ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. ಇದನ್ನು ಖಂಡಿಸಿ ದಲಿತ ಸಂಘಟನೆಗಳು ಪ್ರತಿಭಟನೆಗಳನ್ನು ನಡೆಸುತ್ತಿದ್ದು ಪುಣೆಯಲ್ಲಿ ಹುಟ್ಟಿಕೊಂಡ ಕಲಹ ರಾಜ್ಯದಾದ್ಯಂತ ವ್ಯಾಪಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್