ವಿದ್ಯಾರ್ಥಿಗಳ ಹೊರ ಹಾಕುತ್ತಿರುವ ಪೊಲೀಸರು
ಮುಂಬೈ: ಕೋರೆಗಾಂವ್ ಪ್ರತಿಭಟನೆ ಬೆನ್ನಲ್ಲೇ ಇತ್ತ ಮುಂಬೈನಲ್ಲಿ ಆಯೋಜನೆಯಾಗಿದ್ದ ದಲಿತ ಮುಖಂಡ ಹಾಗೂ ಶಾಸಕ ಜಿಗ್ನೇಶ್ ಮೇವಾನಿ ಕಾರ್ಯಕ್ರಮಕ್ಕೆ ಮುಂಬೈ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ ಎಂದು ತಿಳಿದುಬಂದಿದೆ.
ಮುಂಬೈನ ಭೈದಾಸ್ ಹಾಲ್ ನಲ್ಲಿ ಇಂದು ದಲಿತ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಜಿಗ್ನೇಶ್ ಮೇವಾನಿ ಹಾಗೂ ವಿದ್ಯಾರ್ಥಿ ಮುಖಂಡ ಉಮರ್ ಖಲೀದ್ ಭಾಷಣ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಆದರೆ ಕಾನೂನು ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ಮುಂಬೈ ಪೊಲೀಸರು ಜಿಗ್ನೇಶ್ ಮೇವಾನಿ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿದ್ದಾರೆ. ಅಲ್ಲದೆ ಭೈದಾಸ್ ಹಾಲ್ ನಲ್ಲಿ ಆಯೋಜನೆಯಾಗಿದ್ದ ಛಾತ್ರಭಾರತಿ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದ್ದು, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹಾಜರಾಗಿದ್ದ ನೂರಾರು ವಿದ್ಯಾರ್ಥಿಗಳನ್ನು ಪೊಲೀಸರು ಬಲವಂತವಾಗಿ ಹೊರಗೆ ಕಳುಹಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಛಾತ್ರಭಾರತಿ ಉಪಾಧ್ಯಕ್ಷ ಸಾಗರ್ ಭಲೆರಾವ್ ಅವರು, ಕಾರ್ಯಕ್ರಮಕ್ಕೆ ಜಿಗ್ನೇಶ್ ಮೇವಾನಿ ಮತ್ತು ಉಮರ್ ಖಲೀದ್ ಅವರನ್ನು ಆಹ್ವಾನಿಸಲಾಗಿತ್ತು. ಕಾರ್ಯಕ್ರಮದಲ್ಲಿ ಇಬ್ಬರು ಮುಖಂಡರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಬೇಕಿತ್ತು. ಆದರೆ ಪೊಲೀಸರು ಭದ್ರತಾ ಕಾರಣವೊಡ್ಡಿ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿದ್ದಾರೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics