ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಕುಪ್ವಾರದಲ್ಲಿ ಭೀಕರ ಹಿಮಪಾತ: ಇಬ್ಬರ ಸಾವು, ಐವರು ನಾಪತ್ತೆ

ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಭೀಕರ ಹಿಮಪಾತ ಸಂಭವಿಸಿದ್ದು ಘಟನೆಯಲ್ಲಿ ಕನಿಷ್ಟ ಇಬ್ಬರು ಸಾವನ್ನಪ್ಪಿ, ಐದು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಸಂಗ್ರಹ ಚಿತ್ರ
Srinivasa Murthy VN
Updated On : 6 Jan 2018, 8:46 am
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಭೀಕರ ಹಿಮಪಾತ ಸಂಭವಿಸಿದ್ದು ಘಟನೆಯಲ್ಲಿ ಕನಿಷ್ಟ ಇಬ್ಬರು ಸಾವನ್ನಪ್ಪಿ, ಐದು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು, ಭಾರತೀಯ ಸೇನೆಯ ಸೈನಿಕರು, ಸ್ಥಳೀಯ ಪೊಲೀಸರು, ವಿಪತ್ತು ವಿರ್ವಹಣಾ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.  ತಜ್ಞರು ಅಭಿಪ್ರಾಯಪಟ್ಟಿರುವಂತೆ ಪ್ರಸ್ತುತ ನಾಪತ್ತೆಯಾಗಿರುವವರೆಲ್ಲರೂ ಮೃತಪಟ್ಟಿರುವ ಶಂಕೆ ಇದ್ದು, ಅವರ ಶವಗಳಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. ಪ್ರಸ್ತುತ ದೊರೆತಿರುವ 2 ಮೃತ ದೇಹಗಳ ಪೈಕಿ ಓರ್ವ  ಮಹಿಳೆ ಮತ್ತು 10 ವರ್ಷದ ಬಾಲಕ  ಸೇರಿದ್ದಾರೆ.
ಸ್ಥಳದಲ್ಲಿ ಪೊಲೀಸ್ ಉಪಾಯುಕ್ತ ಖಲೀದ್ ಜೆಹಂಗೀರ್ ಅವರು ಭೇಟಿ ನೀಡಿದ್ದು, ರಕ್ಷಣಾ ಕಾರ್ಯಾಚರಣೆಯ ಮೇಲುಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ನಿನ್ನೆ ಸಂಜೆ ಸುಮಾರು 4 ಗಂಟೆ ಹೊತ್ತಿನಲ್ಲಿ ಹಿಮಪಾತ ಸಂಭವಿಸಿದ್ದು,  ಹಿಮದಡಿಯಲ್ಲಿ 7 ಮಂದಿ ಸಿಲುಕಿದ್ದರು.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement