ಸಾಂದರ್ಭಿಕ ಚಿತ್ರ 
ದೇಶ

ಗಣರಾಜ್ಯೋತ್ಸವಕ್ಕಾಗಿ ದೆಹಲಿ ವಾಯು ಪ್ರದೇಶ ಬಂದ್, 1000 ವಿಮಾನ ರದ್ದು ಸಾಧ್ಯತೆ

ಗಣರಾಜ್ಯೋತ್ಸವ ಪರೇಡ್ ಹಿನ್ನೆಲೆಯಲ್ಲಿ ಸುಮಾರು ಒಂದು ವಾರಗಳ ಕಾಲ ನಿತ್ಯ ಎರಡು ಗಂಟೆಗಳ ಕಾಲ ರಾಷ್ಟ್ರ ರಾಜಧಾನಿ ದೆಹಲಿ...

ನವದೆಹಲಿ: ಗಣರಾಜ್ಯೋತ್ಸವ ಪರೇಡ್ ಹಿನ್ನೆಲೆಯಲ್ಲಿ ಸುಮಾರು ಒಂದು ವಾರಗಳ ಕಾಲ ನಿತ್ಯ ಎರಡು ಗಂಟೆಗಳ ಕಾಲ ರಾಷ್ಟ್ರ ರಾಜಧಾನಿ ದೆಹಲಿ ವಾಯು ಪ್ರದೇಶವನ್ನು ಬಂದ್ ಮಾಡಲಾಗುತ್ತಿದ್ದು, ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಡುವ ಮತ್ತು ಆಗಮಿಸುವ ಸುಮಾರು 1000 ವಿಮಾನಗಳನ್ನು ರದ್ದುಪಡಿಸುವ ಅಥವಾ ಸಮಯ ಬದಲಿಸಲಾಗುತ್ತಿದೆ.
ಗಣರಾಜ್ಯೋತ್ಸವ ಪರೇಡ್ ಗಾಗಿ ನಿರ್ಬಂಧ ವಿಧಿಸಿರುವುದರಿಂದ ಸುಮಾರು 500 ದೇಶಿಯ ವಿಮಾನಗಳ ಸಂಚಾರವನ್ನು ರದ್ದುಗೊಳಿಸಲಾಗುತ್ತಿದೆ ಮತ್ತು ಹಲವು ಅಂತರಾಷ್ಟ್ರೀಯ ವಿಮಾನಗಳ ಸಮಯವನ್ನು ಬದಲಾವಣೆ ಮಾಡಲಾಗುತ್ತಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.
ಜನವರಿ 26ರ ಗಣರಾಜ್ಯೋತ್ಸವ ಪರೇಡ್ ಗೆ ಅಭ್ಯಾಸ ನಡೆಯುತ್ತಿರುವ ನಿಮಿತ್ತ ದೆಹಲಿ ವಾಯು ಪ್ರದೇಶದ ವಾಣಿಜ್ಯ ಬಳಕೆಯನ್ನು ಮತ್ತೆ ಸ್ಥಗಿತಗೊಳಿಸಲಾಗಿದೆ.
ಈ ಸಂಬಂಧ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ವಿಮಾನ ನಿಲ್ದಾಣಗಳಿಗೂ ನೋಟಿಸ್ ಜಾರಿ ಮಾಡಿದ್ದು, ದೆಹಲಿಯಲ್ಲಿ ಜನವರಿ 18ರಿಂದ 26ರ ವರೆಗೆ 9 ದಿನಗಳ ಕಾಲ ಬೆಳಗ್ಗೆ 10.35ರಿಂದ 12.15ರ ವರೆಗೆ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಯಾವುದೇ ವಿಮಾನ ಟೇಕಾಫ್ ಅಥವಾ ಲ್ಯಾಂಡಿಂಗ್ ಆಗದಂತೆ ನೋಡಿಕೊಳ್ಳಿ ಎಂದು ಸೂಚಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT