ಮುಂಬೈ: ಶಿವಸೇನೆ ಮಾಜಿ ಕಾರ್ಪೋರೇಟರ್ ಒಬ್ಬರನ್ನು ದುಷ್ಕರ್ಮಿಗಳು ಭೀಕರವಾಗಿ ಹತ್ಯೆಗೈದಿರುವ ಘಟನೆ ಭಾನುವಾರ ರಾತ್ರಿ ಮುಂಬೈನಲ್ಲಿ ನಡೆದಿದೆ.
ಮುಂಬೈ ಹೊರವಲಯದ ಕಂಡಿವಿಯ ಸಮತಾ ನಗರದ ಮಾಜಿ ಕಾರ್ಪೋರೇಟರ್ ಅಶೋಕ್ ಸಾವಂತ್ (62 ವರ್ಷ)ರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಹತ್ಯೆಗೈದು, ಪರಾರಿಯಾಗಿದ್ದಾರೆ.
ನಿನ್ನೆ ರಾತ್ರಿ ಸುಮಾರು 11 ಗಂಟೆ ಸುಮಾರಿನಲ್ಲಿ ಅಶೋಕ್ ಸಾವಂತ್ ಅವರು ಸ್ನೇಹಿತರೊಬ್ಬರನ್ನು ಭೇಟಿ ಮಾಡಿ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಕಂಡಿವಿ ಆಸ್ಪತ್ರೆ ಬಳಿಯಲ್ಲೇ ಅವರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ. ಬಳಿಕ ಜನ ಸೇರುತ್ತಿದ್ದಂತೆಯೇ ದುಷ್ಕರ್ಮಿಗಳು ಪರಾರಿಯಾಗಿದ್ದು, ಬಳಿಕ ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದರಾದರೂ ಅಷ್ಟು ಹೊತ್ತಿಗಾಗಲೇ ಅವರ ಪ್ರಾಣ ಪಕ್ಷಿ ಹಾರಿಹೊಗಿತ್ತು.
ಇನ್ನು ಮೃತ ಅಶೋಕ್ ಸಾವಂತ್ ಕೇಬಲ್ ಉದ್ಯಮ ನಡೆಸುತ್ತಿದ್ದರು. ಹೀಗಾಗಿ ಸ್ಥಳೀಯ ಕೇಬಲ್ ಮಾಫಿಯಾ ಅವರ ಕೊಲೆಗೆ ಕಾರಣವಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics