ಜಮ್ಮು-ಕಾಶ್ಮೀರ: ಬುದ್ಗಾಮ್'ನಲ್ಲಿ ಓರ್ವ ಉಗ್ರನನ್ನು ಹೊಡೆದುರುಳಿಸಿದ ಸೇನೆ
ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್'ನಲ್ಲಿ ಯೋಧರು ಹಾಗೂ ಉಗ್ರರ ನಡುವೆ ಗುಂಡಿನ ಕಾಳಗ ನಡೆದಿದ್ದು, ಓರ್ವ ಉಗ್ರನನ್ನು ಭಾರತೀಯ ಸೇನೆ ಹೊಡೆದುರುಳಿಸಿರುವುದಾಗಿ ಸೋಮವಾರ ತಿಳಿದುಬಂದಿದೆ...
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್'ನಲ್ಲಿ ಯೋಧರು ಹಾಗೂ ಉಗ್ರರ ನಡುವೆ ಗುಂಡಿನ ಕಾಳಗ ನಡೆದಿದ್ದು, ಓರ್ವ ಉಗ್ರನನ್ನು ಭಾರತೀಯ ಸೇನೆ ಹೊಡೆದುರುಳಿಸಿರುವುದಾಗಿ ಸೋಮವಾರ ತಿಳಿದುಬಂದಿದೆ.
ಬುದ್ಗಾಮ್ ನಲ್ಲಿರುವ ಕನೀರಾ ಗ್ರಾಮದಲ್ಲಿ ಉಗ್ರರು ಆಡಗಿ ಕುಳಿತಿರುವುದಾಗಿ ಖಚಿತ ಮಾಹಿತಿ ಲಭ್ಯವಾದ ಹಿನ್ನಲೆಯಲ್ಲಿ ರಾಷ್ಟ್ರೀಯ ರೈಫಲ್ಸ್, ಸಿಆರ್'ಪಿಎಫ್ ಪಡೆ, ವಿಶೇಷ ಕಾರ್ಯಾಚರಣಾ ಪಡೆ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಲು ಆರಂಭಿಸಿದ್ದರು.
ಕಾರ್ಯಾಚರಣೆ ಆರಂಭವಾಗುತ್ತಿದ್ದಂತೆಯೇ ಉಗ್ರರು ಸೇನಾಪಡೆಗಳ ಮೇಲೆ ಏಕಾಏಕಿ ಗುಂಡು ಹಾರಿಸಲು ಆರಂಭಿಸಿದ್ದಾರೆ. ಬಳಿಕ ಕಾರ್ಯಾಚರಣೆಯನ್ನು ಚುರುಕುಗೊಳಿಸಿದ ಭದ್ರತಾಪಡೆಗಳು ಇದೀಗ ಓರ್ವ ಉಗ್ರನನ್ನು ಹೊಡೆದುರುಳಿಸಿದೆ ಎಂದು ತಿಳಿದುಬಂದಿದೆ.
ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಉಗ್ರರಿದ್ದ ಸ್ಥಳ ತಲುಪುತ್ತಿದ್ದಂತೆಯೇ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಲು ಆರಂಭಿಸಿದ್ದರು, ಬಳಿಕ ಎನ್ ಕೌಂಟರ್ ನಡೆಸಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಯಿತು. ಪ್ರಸ್ತುತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.