ಜೈಪುರ: ಪದ್ಮಾವತ್ ಚಿತ್ರದ ಬಿಡುಗಡೆಗೆ ಸೆನ್ಸಾರ್ ಮಂಡಳಿ ಒಪ್ಪಿಗೆ ಸೂಚಿಸಿದ್ದರೂ ರಾಜಸ್ಥಾನದಲ್ಲಿ ಮಾತ್ರ ಚಿತ್ರ ಬಿಡುಗಡೆಯಾಗುವ ಲಕ್ಷಣಗಳು ಕಾಣುತ್ತಿಲ್ಲ. ಚಿತ್ರದ ಬಿಡುಗಡೆ ಬಗ್ಗೆ ರಾಜಸ್ಥಾನದ ಮುಖ್ಯಮಂತ್ರಿ ವಸುಂಧರಾ ರಾಜೆ ಮಾತನಾಡಿದ್ದು, ಪದ್ಮಾವತಿ ಚಿತ್ರ ಬಿಡುಗಡೆಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.
ಜ.25 ಕ್ಕೆ ಪದ್ಮಾವತ್ ಚಿತ್ರ ಬಿಡುಗಡೆಯಾಗಲಿದ್ದು, ಚಿತ್ರ ಬಿಡುಗಡೆಯಾಗುವುದಿಲ್ಲ ಎಂಬುದನ್ನು ರಾಜಸ್ಥಾನ ಗೃಹ ಸಚಿವ ಗುಲಾಬ್ ಚಂದ್ ಹೇಳಿದ್ದಾರೆ. ಮುಖ್ಯಮಂತ್ರಿ ವಸುಂಧರಾ ರಾಜೆ ಅವರ ಆದೇಶದ ಅನುಸಾರವಾಗಿ ಪದ್ಮಾವತಿ ಚಿತ್ರ ಬಿಡುಗಡೆಯಾಗುವುದಿಲ್ಲ ಎಂದು ಚಿತ್ರ ಬಿಡುಗಡೆಯ ದಿನಾಂಕ ಖಾತ್ರಿಯಾಗುತ್ತಿದ್ದಂತೆ ಕಟಾರಿಯಾ ಸ್ಪಷ್ಟಪಡಿಸಿದ್ದಾರೆ.
ಇದೇ ವೇಳೆ ರಜಪೂತ್ ಕರಣಿ ಸೇನಾ ಸಹ ಚಿತ್ರ ಬಿಡುಗಡೆಗೆ ವಿರೋಧ ವ್ಯಕ್ತಪಡಿಸಿದ್ದು, ಸಿಬಿಎಫ್ ಸಿ ಕಚೇರಿ ಹಾಗೂ ಪ್ರಧಾನಿ ಕಚೇರಿಗೆ ಘೇರಾವ್ ಹಾಕುವುದಾಗಿ ಎಚ್ಚರಿಕೆ ನೀಡಿದೆ.