ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಮೂವರು ಎಎಪಿ ಅಭ್ಯರ್ಥಿಗಳು ರಾಜ್ಯಸಭೆಗೆ ಅವಿರೋಧ ಆಯ್ಕೆ

ಆಮ್ ಆದ್ಮಿ ಪಕ್ಷ(ಎಎಪಿ)ದ ಅಭ್ಯರ್ಥಿಗಳಾದ ಸಂಜಯ್ ಸಿಂಗ್, ಸುಶೀಲ್ ಗುಪ್ತಾ ಹಾಗೂ ಎನ್ ಡಿ ಗುಪ್ತಾ ಅವರು ಸೋಮವಾರ....

ಅರವಿಂದ್ ಕೇಜ್ರಿವಾಲ್
Lingaraj Badiger
Updated On : 8 Jan 2018, 6:57 am
ನವದೆಹಲಿ: ಆಮ್ ಆದ್ಮಿ ಪಕ್ಷ(ಎಎಪಿ)ದ ಅಭ್ಯರ್ಥಿಗಳಾದ ಸಂಜಯ್ ಸಿಂಗ್, ಸುಶೀಲ್ ಗುಪ್ತಾ ಹಾಗೂ ಎನ್ ಡಿ ಗುಪ್ತಾ ಅವರು ಸೋಮವಾರ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ದೆಹಲಿಯಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ಎಎಪಿಯ ಮೂವರು ಅಭ್ಯರ್ಥಿಗಳಿಗೆ ಚುನಾವಣಾ ಅಧಿಕಾರಿ ನಿಧಿ ಶ್ರೀವಾತ್ಸವ್ ಅವರು ಪ್ರಮಾಣ ಪತ್ರ ನೀಡಿದ್ದಾರೆ.
ಸಂಜಯ್ ಸಿಂಗ್ ಮೊದಲಿನಿಂದಲೂ ಆಪ್ ನೊಂದಿಗೆ ಗುರುತಿಸಿಕೊಂಡಿದ್ದು, ಸುಶೀಲ್ ಗುಪ್ತಾ ಅವರು ದೆಹಲಿ ಮೂಲದ ಉದ್ಯಮಿಯಾಗಿದ್ದಾರೆ. ಇನ್ನು ಮೂರನೇ ಅಭ್ಯರ್ಥಿ ಎನ್ ಡಿ ಗುಪ್ತಾ ಒಬ್ಬ ಚಾರ್ಟರ್ಡ್ ಅಕೌಂಟೆಂಟ್ ಆಗಿದ್ದಾರೆ.

Advertisement

Advertisement

ಸುಶೀಲ್ ಗುಪ್ತಾ ಅವರು ದೆಹಲಿ ಮತ್ತು ಹರಿಯಾಣದಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. 15 ಸಾವಿರ ಮಕ್ಕಳಿಗೆ ಶಿಕ್ಷಣ ನೀಡುತ್ತಿದ್ದಾರೆ ಎಂದು ಎಎಪಿಯ ಮೂವರು ಅಭ್ಯರ್ಥಿಗಳು ರಾಜ್ಯಸಭೆಗೆ ಆಯ್ಕೆಯಾದ ನಂತರ ದೆಹಲಿ ಉಪ ಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಅವರು ಹೇಳಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement