ನವದೆಹಲಿ: ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಕಡ್ಡಾಯವಲ್ಲ ಎಂದು ಹೇಳುವ ಮೂಲಕ ಈ ಹಿಂದಿನ ತನ್ನದೇ ತೀರ್ಪನ್ನು ಸುಪ್ರೀಂ ಕೋರ್ಟ್ ಮಂಗಳವಾರ ಬದಲಿಸಿದೆ.
ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಕಡ್ಡಾಯಗೊಳಿಸಿ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವನ್ನು ಮರು ಪರಿಶೀಲನೆ ಮಾಡುವಂತೆ ಕೇಂದ್ರ ಸರ್ಕಾರ ಸಲ್ಲಿಕೆ ಮಾಡಿದ್ದ ಪ್ರಮಾಣಪತ್ರವನ್ನು ಆಧರಿಸಿ ದೇಶದ ಸರ್ವೋಚ್ಛ ನ್ಯಾಯಾಲಯ ತನ್ನ ತೀರ್ಪನ್ನು ಬದಲಿಸಿದೆ ಎನ್ನಲಾಗುತ್ತಿದೆ.
ನಿನ್ನೆಯಷ್ಟೇ ಕೇಂದ್ರ ಸರ್ಕಾರ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಕಡ್ಡಾಯಗೊಳಿಸಿದ್ದ ಆದೇಶವನ್ನು ಮರುಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿಕೊಂಡಿತ್ತು, ಪ್ರಸ್ತುತ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಕಡ್ಡಾಯಗೊಳಿಸದಂತೆಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಹೇಳಿತ್ತು. ಅಲ್ಲದೆ ಈ ಸಂಬಂಧ ಮಾರ್ಗದರ್ಶಕ ಸೂಚನೆಗಳ ಸಿದ್ಧಪಡಿಸಲು ಸಚಿವರ ಸಮಿತಿ ರಚನೆ ಮಾಡುವುದಾಗಿಯೂ ಕೇಂದ್ರ ಗೃಹ ಸಚಿವಾಲಯದಿಂದ ಪ್ರಮಾಣಪತ್ರ ಸಲ್ಲಿಕೆ ಮಾಡಿತ್ತು.
2016ರ ಸನವೆಂಬರ್ ನಲ್ಲಿ ಮೊದಲ ಬಾರಿಗೆ ಈ ಸಂಬಂಧ ಆದೇಶ ನೀಡಿದ್ದ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. ಆದರೆ ಬಳಿಕ ಇದಕ್ಕೆ ವ್ಯಾಪಕ ಪರ ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾಗಿದ್ದವವು. ಬಳಿಕ ಕಳೆದ ಅಕ್ಟೋಬರ್ ನಲ್ಲಿ ಸುಪ್ರೀಂಕೋರ್ಟ್ ಮತ್ತೆ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಯನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿತ್ತು. ಇದೀಗ ಈ ಪ್ರಕರಣ ಸಂಬಂಧ ಕೇಂದ್ರ ಸರ್ಕಾರ ಸಚಿವರ ಸಮಿತಿ ರಚನೆ ಮಾಡಿ ಅಗತ್ಯ ಮಾರ್ಗದರ್ಶಕ ಸೂಚನೆಗಳ ಸಿದ್ಧಪಡಿಸಲು ಮುಂದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics