ಕಾಶ್ಮೀರದಲ್ಲಿ ಉಗ್ರ ನಿಗ್ರಹ ಕಾರ್ಯಾಚರಣೆ 
ದೇಶ

ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಉಗ್ರ ನಿಗ್ರಹ ಕಾರ್ಯಾಚರಣೆ, ಇಬ್ಬರು ಉಗ್ರರ ಎನ್ ಕೌಂಟರ್!

ಕಣಿವೆ ರಾಜ್ಯ ಕಾಶ್ಮೀರದಲ್ಲಿ ಭಾರತೀಯ ಸೇನೆಯ ಸೈನಿಕರು ಉಗ್ರ ನಿಗ್ರಹ ಕಾರ್ಯಾಚರಣೆ ಆರಂಭಿಸಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ.

ಶ್ರೀನಗರ: ಕಣಿವೆ ರಾಜ್ಯ ಕಾಶ್ಮೀರದಲ್ಲಿ ಭಾರತೀಯ ಸೇನೆಯ ಸೈನಿಕರು ಉಗ್ರ ನಿಗ್ರಹ ಕಾರ್ಯಾಚರಣೆ ಆರಂಭಿಸಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಕೋಕರ್ನಾಗ್ ನ ಲರ್ನೂ ಪ್ರದೇಶದಲ್ಲಿ ಇಬ್ಬರು ಉಗ್ರರನ್ನು ಸೈನಿಕರು ಹೊಡೆದುರುಳಿಸಿದ್ದು, ಇನ್ನೂ ಉಬ್ಬರು ಉಗ್ರರು ಅವಿತಿರುವ ಶಂಕೆ ಮೇರೆಗೆ ಸೇನಾಧಿಕಾರಿಗಳು ತೀವ್ರ ಶೋಧ ನಡೆಸುತ್ತಿದ್ದಾರೆ. ಕಾರ್ಯಾಚರಣೆ ಪ್ರಗತಿಯಲ್ಲಿದ್ದು, ಉಗ್ರರು ಮತ್ತು ಸೇನೆ ನಡುವೆ ಗುಂಡಿನ ಚಕಮಕಿ ಮುಂದುವರೆದಿದೆ.
ಇನ್ನು ಮೃತ ಉಗ್ರರ ಪೈಕಿ ಓರ್ವ ಉಗ್ರನ ಗುರುತು ಪತ್ತೆ ಮಾಡಲಾಗಿದ್ದು, ಮೃತನನ್ನು ಮಹಮದ್ ಫುರ್ಹಾನ್ ವಾನಿ ಎಂದು ಗುರುತಿಸಲಾಗಿದೆ. ಈತ ಕಳೆದೆರಡು ವರ್ಷಗಳಿಂದ ಉಗ್ರ ಸಂಘಟನೆಗಳೊಂದಿಗೆ ಗುರುತಿಸಿಕೊಂಡಿದ್ದ ಎನ್ನಲಾಗುತ್ತಿದೆ. ಗುಪ್ತಚರ ಮೂಲಗಳು ನೀಡಿದ ಮಾಹಿತಿ ಮೇರೆಗೆ ಕೋಕರ್ನಾಗ್ ಅರಣ್ಯ ಪ್ರದೇಶದಲ್ಲಿ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!