ನವದೆಹಲಿ: 1984 ರಲ್ಲಿ ನಡೆದ ಸಿಖ್ ವಿರೋಧಿ ದಂಗೆ ಘಟನೆಗೆ ಸಂಬಂಧಿಸಿದಂತೆ 186 ಪ್ರಕರಣಗಳ ಮರು ತನಿಖೆ ನಡೆಸುವುದಕ್ಕೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.
ಈ 186 ಪ್ರಕರಣಗಳನ್ನು ವಿಶೇಷ ತನಿಖಾ ತಂಡ (ಎಸ್ಐಟಿ)ದಿಂದ ತನಿಖೆ ನಡೆಸಲಾಗಿತ್ತು. 186 ಪ್ರಕರಣಗಳ ತನಿಖೆಗಾಗಿ ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚನೆ ಮಾಡುವುದಾಗಿ ಕೋರ್ಟ್ ಹೇಳಿದ್ದು, ಸಮಿತಿಯಲ್ಲಿರಬೇಕಾಗಿರುವವರ ಹೆಸರನ್ನು ಸೂಚಿಸುವಂತೆ ಕೇಂದ್ರ ಸರ್ಕಾರವನ್ನು ಕೇಳಿದೆ.
ಸಮಿತಿಯಲ್ಲಿ ಓರ್ವ ನಿವೃತ್ತ ಪೊಲೀಸ್ ಅಧಿಕಾರಿ ಹಾಗೂ ಓರ್ವ ಕರ್ತವ್ಯದಲ್ಲಿರುವ ಅಧಿಕಾರಿ ಇರಲಿದ್ದಾರೆ ಎಂದು ಕೋರ್ಟ್ ಹೇಳಿದೆ.