ದೇಶ

ಕೇಂದ್ರೀಯ ವಿದ್ಯಾಲಯಗಳಲ್ಲಿ ಹಿಂದು ಧರ್ಮಕ್ಕೆ ಪ್ರಚಾರ: ಕೇಂದ್ರದ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್

Manjula VN
ನವದೆಹಲಿ: ಕೇಂದ್ರೀಯ ವಿದ್ಯಾಲಯಗಳಲ್ಲಿ ಹಿಂದೂ ಧರ್ಮಕ್ಕೆ ಪ್ರೋತ್ಸಾಹ ನೀಡಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದ ಹಿನ್ನಲೆಯಲ್ಲಿ ಆರೋಪ ಕುರಿತಂತೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಬುಧವಾರ ಸೂಚನೆ ನೀಡಿದೆ. 
ಸರ್ಕಾರಿ ಸ್ವಾಮ್ಯದ ಕೇಂದ್ರೀಯ ವಿದ್ಯಾಲಯಗಳಲ್ಲಿ ಹಿಂದೂ ಧರ್ಮ ಪ್ರಚಾರಪಡಿಸುವ ಶಾಲಾ ಪ್ರಾರ್ಥನೆಗಳನ್ನು ನಡೆಸಲಾಗುತ್ತಿದ್ದು, ಇದನ್ನು ಪ್ರಶ್ನಿಸಿ ಕೆಲ ದಿನಗಳ ಹಿಂದಷ್ಟೇ ವಕೀಲರೊಬ್ಬರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದು ದಾಖಲಾಗಿತ್ತು. 
ಈ ಅರ್ಜಿಯನ್ನು ಇಂದು ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್, ಆರೋಪಗಳ ಕುರಿತಂತೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಅಲ್ಲದೆ, ಕೇಂದ್ರೀಯ ವಿದ್ಯಾಲಯಗಳಲ್ಲಿ ಒಂದು ಧರ್ಮ ಪ್ರಚಾಪಡಿಸುವ ಪ್ರಾರ್ಥನೆ ಮಾಡಲು ಅವಕಾಶ ನೀಡಿದ್ದೇಕೆ? ಸರ್ಕಾರಿ ಹಾಗೂ ಅನುದಾನಿತ ಶಾಲೆಗಳು ಯಾವುದೇ ಧರ್ಮವನ್ನು ಪ್ರಚಾರ ಮಾಡುವಂತಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಚಾಟಿ ಬೀಸಿದೆ. 
2015ರ ಅಂಕಿ-ಅಂಶದ ಪ್ರಕಾರ ಭಾರತದಲ್ಲಿ ಒಟ್ಟು 1,125 ಹಾಗೂ ವಿದೇಶದಲ್ಲಿ 3 ಕೇಂದ್ರೀಯ ವಿದ್ಯಾಲಯಗಳಿವೆ. ಈ ಶಾಲೆಗಳಲ್ಲಿ ಸುಮಾರು 11 ಲಕ್ಷ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. 
SCROLL FOR NEXT