ಸಂಗ್ರಹ ಚಿತ್ರ 
ದೇಶ

ದಕ್ಷಿಣ ಕಾಶ್ಮೀರದಲ್ಲಿ ಎನ್'ಕೌಂಟರ್: ಹಿಜ್ಬುಲ್ ಮುಜಾಹಿದ್ದೀನ್ ಉಗ್ರನ ಹತ್ಯೆ

ದಕ್ಷಿಣ ಕಾಶ್ಮೀರದ ಕೊಕೆರ್ನಾಗ್ ಪ್ರದೇಶದಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದ ಓರ್ವ ಉಗ್ರನನ್ನು ಮಂಗಳವಾರ ಹತ್ಯೆ ಮಾಡಿದೆ...

ಶ್ರೀನಗರ: ದಕ್ಷಿಣ ಕಾಶ್ಮೀರದ ಕೊಕೆರ್ನಾಗ್ ಪ್ರದೇಶದಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದ ಓರ್ವ ಉಗ್ರನನ್ನು ಮಂಗಳವಾರ ಹತ್ಯೆ ಮಾಡಿದೆ. 
ಕೊಕೆರ್ನಾಗ್ ಪ್ರದೇಶದಲ್ಲಿ ಭದ್ರತಾಪಡೆ ಉಗ್ರರ ವಿರುದ್ದ ಕಾರ್ಯಾಚರಣೆ ನಡೆಸುತ್ತಿದ್ದಂತೆಯೇ ಇದ್ದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ಪ್ರತಿಭಟನಾಕಾರರ ನಡುವೆ ಘರ್ಷಣೆ ಏರ್ಪಟ್ಟಿತ್ತು. ಘರ್ಷಣೆ ವೇಳೆ ಓರ್ವ ನಾಗರೀಕ ಸಾವನ್ನಪ್ಪಿದ್ದಾರೆಂದು ವರದಿಗಳು ತಿಳಿಸಿವೆ. 
ದಕ್ಷಿಣ ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಕೊಕೆರ್ನಾಗ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಪೊಲೀಸರು, ಸಿಆರ್'ಪಿಎಫ್ ಮತ್ತು ಸೇನಾ ಪಡೆ ಜಂಟಿಯಾಗಿ ಕಾರ್ಯಾಚರಣೆ ನಡೆಸಲು ಆರಂಭಿಸಿದ್ದವು. ಕಾರ್ಯಾಚರಣೆ ಆರಂಭವಾಗುತ್ತಿದ್ದಂತೆಯೇ ಉಗ್ರರು ಯೋಧರ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದರು. ಬಳಿಕ ಉಗ್ರರ ದಾಳಿಗೆ ಸೇನಾಪಡೆ ಪ್ರತಿದಾಳಿ ನಡೆಸಿ ಹಿಜ್ಬುಲ್ ಉಗ್ರ ಸಂಘಟನೆಗೆ ಸೇರಿದ ಓರ್ವ ಉಗ್ರನನ್ನು ಹತ್ಯೆಮಾಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 
ಹತ್ಯೆಯಾದ ಉಗ್ರರನ್ನು ಫರ್ಹಾನ್ ಅಹ್ಮದ್ ವಾನಿ ಎಂದು ಗುರ್ತಿಸಲಾಗಿದೆ. ಪ್ರಸ್ತುತ ಹತ್ಯೆಯಾಗಿರುವ ಉಗ್ರರ ಕಾಶ್ಮೀರದಲ್ಲಿ ಈ ಹಿಂದೆ ಕಲ್ಲುತೂರಾಟಗಾರನಾಗಿದ್ದ. ಹತ್ಯೆಯಾದ ಉಗ್ರನಿಂದ 1 ಇನ್ಸಾಫ್ ರೈಫಲ್, 2 ನಿಯತಕಾಲಿಕೆಗಳು ಮತ್ತು 42 ಸುತ್ತಿನ ಗುಂಡುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. 
ಎನ್ ಕೌಂಟರ್ ವೇಳೆ ಅಫ್ರಫ್ ಖಾನ್ ಅಲಿಯಾಸ್ ಅಫ್ರಫ್ ಮೌಲ್ವಿ ಎಂಬ ಉಗ್ರ ಕೂಡ ಇದ್ದ. ಈತ ಕೂಡ ಹಿಜ್ಬುಲ್ ಸಂಘಟನೆಗೆ ಸೇರಿದ್ದ ಉಗ್ರನಾಗಿದ್ದ. ಕಾರ್ಯಾಚರಣೆ ವೇಳೆ ಇಬ್ಬರು ಉಗ್ರರು ತಪ್ಪಿಸಿಕೊಂಡಿದ್ದಾರೆಂದು ಅಧಿಕಾರಿಗಳು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹನಿಟ್ರ್ಯಾಪ್ ಭೀತಿಯಲ್ಲಿದ್ದ ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಮಾಧ್ಯಮಗಳಿಗೆ ವಿಡಿಯೋ ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸಿದ ಕೋರ್ಟ್

ಅವಧಿಗೂ ಮುನ್ನವೇ ಕೇಂದ್ರ ಸಚಿವ ಮತ್ತು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ BJP ನಾಯಕ ಮುರುಗನ್ ರಾಜಿನಾಮೆ: PM ಮೋದಿಗೆ 5 ಪುಟಗಳ ಪತ್ರ!

'ಇಂಡಿಯಾ' ಮೈತ್ರಿಕೂಟದ ಒಗ್ಗಟ್ಟು ಮುರಿಯುತ್ತಿದೆಯೇ? ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂಗೆ ಅರ್ಜಿ, 4 ಪ್ರಮುಖ ಪಕ್ಷಗಳು "ದೂರ ದೂರ"

'ನೀನು ಭಯೋತ್ಪಾದಕ ಇಲ್ಲಿಂದ ಹೋಗು': ಅಮೆರಿಕದಲ್ಲಿ Nobel ಯೂನಸ್ ವಿರುದ್ಧ ಬಾಂಗ್ಲಾ ವಲಸಿಗರಿಂದ ಘೋಷಣೆ, Video

ಮುಖ್ಯ ಚುನಾವಣಾ ಆಯುಕ್ತರಿಗೆ ಪದ್ಮ ಪ್ರಶಸ್ತಿಗಳೇ ಲಂಚ: ಕೇಂದ್ರ ಸಚಿವ ಪಿಯೂಷ್ ಗೋಯಲ್ ಸ್ಫೋಟಕ ಹೇಳಿಕೆ