ಸಿವನ್ ಕೆ 
ದೇಶ

ಇಸ್ರೋ ನೂತನ ಅಧ್ಯಕ್ಷರಾಗಿ ಸಿವನ್ ಕೆ ನೇಮಕ

ಭಾರತೀಯ ಬಾಹ್ಯಾಕಾಶ ಸಂಶೋಧನ ಸಂಸ್ಥೆ(ಇಸ್ರೋ)ಯ ನೂತನ ಅಧ್ಯಕ್ಷರನ್ನಾಗಿ ಸಿವನ್ ಕೆ ಅವರನ್ನು ಕೇಂದ್ರ ಸರ್ಕಾರ....

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನ ಸಂಸ್ಥೆ(ಇಸ್ರೋ)ಯ ನೂತನ ಅಧ್ಯಕ್ಷರನ್ನಾಗಿ ಸಿವನ್ ಕೆ ಅವರನ್ನು ಕೇಂದ್ರ ಸರ್ಕಾರ ಬುಧವಾರ ನೇಮಕ ಮಾಡಿದೆ.
ಸಿವಾನ್ ಕೆ ಅವರನ್ನು ಮುಂದಿನ ಮೂರು ವರ್ಷಗಳ ಅವಧಿಗೆ ಬಾಹ್ಯಾಕಾಶ ಇಲಾಖೆಯ ನೂತನ ಕಾರ್ಯದರ್ಶಿ ಮತ್ತು ಇಸ್ರೋದ ಮುಖ್ಯಸ್ಥರಾಗಿ ನೇಮಕ ಮಾಡಲು ಸಂಪುಟ ನೇಮಕ ಸಮಿತಿ ಒಪ್ಪಿಗೆ ಸೂಚಿಸಿದೆ ಎಂದು ಕೇಂದ್ರ ಸಿಬ್ಬಂದಿ ಸಚಿವಾಲಯ ಆದೇಶ ಹೊರಡಿಸಿದೆ.
ಜನವರಿ 12, 2015ರಲ್ಲಿ ಇಸ್ರೋ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಕನ್ನಡಿಗ, ಆಲೂರು ಸೀಳಿನ್‌ ಕಿರಣ್‌ ಕುಮಾರ್‌ ಅವರ ಅಧಿಕಾರವಧಿ ಮುಗಿದ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದ ನಿರ್ದೇಶಕರಾಗಿದ್ದ ಸಿವನ್ ಅವರನ್ನು ನೇಮಕ ಮಾಡಲಾಗಿದೆ. 
1980 ರಲ್ಲಿ ಮದ್ರಾಸ್ ಐಐಟಿಯಿಂದ ಏರೋನಾಟಿಕಲ್ ಇಂಜಿನಿಯರಿಂಗ್ ನಲ್ಲಿ ಪದವಿ ಪಡೆದಿದ್ದ ಸಿವನ್ ಅವರು, 1982ರಲ್ಲಿ ಬೆಂಗಳೂರಿನ ಐಐಎಸ್ಸಿಯಿಂದ ಏರೋಸ್ಪೇಸ್ ಇಂಜಿನಿಯರಿಂಗ್ ನಲ್ಲಿ ಸ್ನಾತಕೋತ್ತರ ಪದವಿ ಪಡೆದು, 1982ರಲ್ಲೇ ಇಸ್ರೋ ಸೇರಿಕೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್