ಮೃತನ ಜತೆ ರಾಧಾ ಕೃಷ್ಣನ್ 
ದೇಶ

ಬಸ್ಸಿನಲ್ಲಿ ಮೃತಪಟ್ಟ ಪ್ರಯಾಣಿಕನ ಶವ ರಾಷ್ಟ್ರೀಯ ಹೆದ್ದಾರಿ ಬದಿಗಿಟ್ಟು ಹೋದ ಕಂಡಕ್ಟರ್!

ರಾಜ್ಯ ರಸ್ತೆ ಸಾರಿಗೆಯ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನೋರ್ವ ಮೃತಪಟ್ಟಾಗ ಆತನ ಸ್ನೇಹಿತನ ಜತೆಗೆ ಶವವನ್ನು ಕೃಷ್ಣಗಿರಿ ರಾಷ್ಟ್ರೀಯ ಹೆದ್ದಾರಿ ಪಕ್ಕ ಇಳಿಸಿ ಬಸ್ ಕಂಡಕ್ಟರ್...

ಕೃಷ್ಣಗಿರಿ(ತಮಿಳುನಾಡು): ರಾಜ್ಯ ರಸ್ತೆ ಸಾರಿಗೆಯ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನೋರ್ವ ಮೃತಪಟ್ಟಾಗ ಆತನ ಸ್ನೇಹಿತನ ಜತೆಗೆ ಶವವನ್ನು ಕೃಷ್ಣಗಿರಿ ರಾಷ್ಟ್ರೀಯ ಹೆದ್ದಾರಿ ಪಕ್ಕ ಇಳಿಸಿ ಬಸ್ ಕಂಡಕ್ಟರ್ ತೆರಳಿರುವ ಅತ್ಯಂತ ಆಘಾತಕಾರಿ ಘಟನೆ ವರದಿಯಾಗಿದೆ. 
43 ವರ್ಷದ ರಾಧಾ ಕೃಷ್ಣನ್ ಮತ್ತು ಅವರ ಸ್ನೇಹಿತ 54 ವರ್ಷದ ವೀರನ್ ಎಂಬುವರು ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು. ಮಾರ್ಗ ಮಧ್ಯೆ ವೀರನ್ ಎಂಬುವರು ಮೃತಪಟ್ಟಿದ್ದಾರೆ. ಆಗ ಬಸ್ ಕಂಡಕ್ಟರ್ ರಾಧಾ ಕೃಷ್ಣನ್ ಮತ್ತು ವೀರನ್ ಅವರ ಮೃತದೇಹವನ್ನು ಬಸ್ಸಿನಿಂದ ಕೆಳಗಿಳಿಸಿ ತೆರಳಿದ್ದಾರೆ. 
ರಾಷ್ಟ್ರೀಯ ಹೆದ್ದಾರಿಯಲ್ಲಿ ಶವದ ಪಕ್ಕದಲ್ಲಿ ರಾಧಾ ಕೃಷ್ಣನ್ ಕುಳಿತಿದ್ದು ಇದನ್ನು ಕಂಡು ಮಾಧ್ಯಮದವರು ಪ್ರಶ್ನಿಸಿದಾಗ ಈ ದಾರುಣ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನಲ್ಲಿ ಕಟ್ಟಡ ಕಾರ್ಮಿಕರಾಗಿರುವ ಇವರು ತಮಿಳುನಾಡಿನ ತಿರುವಣ್ಣಮಲೈಗೆ ರಾಜ್ಯ ಸಾರಿಗೆ ಬಸ್ಸಿನಲ್ಲಿ ಪ್ರಯಾಣಿಸಿದ್ದರು. 
ಬೆಂಗಳೂರಿನಿಂದ ತಿರುವಣ್ಣಮಲೈಗೆ ನಾವು ತಲಾ 150 ರುಪಾಯಿ ಕೊಟ್ಟು ಬಸ್ ಟಿಕೆಟ್ ಪಡೆದು ಪ್ರಯಾಣಿಸುತ್ತಿದ್ದೆವು. ಮಾರ್ಗ ಮಧ್ಯೆ ಈ ಘಟನೆ ನಡೆದಿದೆ. ಬಸ್ ನಿಂದ ನಮ್ಮನ್ನು ಕೆಳಗಿಳಿಸುವಾಗ ನಮ್ಮ ಹಣವನ್ನು ವಾಪಸ್ ಕೊಡುವಂತೆ ನಾನು ಕಂಡಕ್ಟರ್ ನಲ್ಲಿ ಗೋಗರೆದೆ. ಅದಕ್ಕೆ ಆತ ನಿರಾಕರಿಸಿದ. ಆದ್ದರಿಂದ ನಾನು ಇಲ್ಲಿ ಕುಳಿತು ಯಾವುದಾದರೂ ಆ್ಯಂಬುಲೆನ್ಸ್ ಬರುತ್ತದೆಯೇ ಎಂದು ಕಾದು ನೋಡುತ್ತಿದ್ದೇನೆ ಎಂದು ಮಾಧ್ಯಮದವರ ಮುಂದೆ ತಮ್ಮ ಅಳಲನ್ನು ತೊಡಿಕೊಂಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

SCROLL FOR NEXT