ದೇಶ

ಪಕ್ಷಾಂತರ ಕಾಯ್ದೆ ಉಲ್ಲಂಘಿಸಿದ ತ್ರಿಪುರ ಕಾಂಗ್ರೆಸ್ ಶಾಸಕನ ಸದಸ್ಯತ್ವ ರದ್ದು

Lingaraj Badiger
ಅಗರತಾಲ: ಪಕ್ಷಾಂತರ ನಿಷೇಧ ಕಾಯ್ದೆ ಉಲ್ಲಂಘಿಸಿದ ಆರೋಪದ ಮೇಲೆ ಐದು ಬಾರಿ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದ ತ್ರಿಪುರದ ರತನ್ ಲಾಲ್ ನಾಥ್ ಅವರನ್ನು ಅನರ್ಹಗೊಳಿಸಲಾಗಿದೆ.
ಕಳೆದ ವರ್ಷ ಡಿಸೆಂಬರ್ 22ರಂದು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ರತನ್ ಲಾಲ್ ನಾಥ್ ಅವರನ್ನು ಪಕ್ಷಾಂತರ ನಿಷೇಧ ಕಾಯ್ದೆ ಅಡಿ ಅನರ್ಹಗೊಳಿಸಿರುವುದಾಗಿ ಸ್ಪೀಕರ್ ರಾಮೇಂದ್ರ ಚಂದ್ರ ದೆಬುನಾಥ್ ಅವರು ಐಎಎನ್ ಎಸ್ ಗೆ ತಿಳಿಸಿದ್ದಾರೆ.
ಬಿಜೆಪಿ ಸೇರಿದ ನಾಥ್ ಅವರ ಸದಸ್ಯತ್ವನ್ನು ಅನರ್ಹಗೊಳಿಸುವಂತೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಬೀರಜಿತ್ ಸಿನ್ಹಾ ಅವರು ಸ್ಪೀಕರ್ ಗೆ ಪತ್ರ ಬರೆದಿದ್ದರು. ಈ ಸಂಬಂಧ ನಾನು ವಿಚಾರಣೆಗೆ ಹಾಜರಾಗುವಂತೆ ನಾಥ್ ಅವರಿಗೆ ಎರಡು ಬಾರಿ ನೋಟಿಸ್ ನೀಡಿದ್ದೆ. ಆದರೆ ಅನಾರೋಗ್ಯದ ನೆಪ ಹೇಳಿ ವಿಚಾರಣೆಗೆ ಹಾಜರಾಗಿರಲಿಲ್ಲ. ಹೀಗಾಗಿ ಅನರ್ಹಗೊಳಿಸಲಾಗಿದೆ ಎಂದು ಸ್ಪೀಕರ್ ತಿಳಿಸಿದ್ದಾರೆ.
ತ್ರಿಪುರ ವಿಧಾನಸಭೆ ಇತಿಹಾಸದಲ್ಲೇ ಹಾಲಿ ಶಾಸಕರೊಬ್ಬರು ಪಕ್ಷಾಂತರ ನಿಷೇಧ ಕಾಯ್ದೆ ಅಡಿ ಅನರ್ಹಗೊಂಡಿರುವುದು ಇದೇ ಮೊದಲು.
SCROLL FOR NEXT