ದೇಶ

100ನೇ ಉಪಗ್ರಹ ಯಶಸ್ವಿ ಉಡಾವಣೆ: ಇಸ್ರೋಗೆ ಪ್ರಧಾನಿ ಮೋದಿ ಅಭಿನಂದನೆ

Manjula VN
ನವದೆಹಲಿ: ಕಾರ್ಟೋಸ್ಯಾಟ್-2 ಉಪಗ್ರಹ ಸೇರಿದಂತೆ ಇತರ 31 ಉಗ್ರಹಗಳನ್ನು ಯಶಸ್ವಿಯಾಗಿ ಉಡಾವಣೆ ಮಾಡಿ ಐತಿಹಾಸಿಕ ದಾಖಲೆ ಬರೆದಿರುವ ಇಸ್ರೋಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಶುಭಾಶಯಗಳನ್ನು ಹೇಳಿದ್ದಾರೆ. 
ಇಸ್ರೋ ಸಾಧನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಮೋದಿ, ಪಿಎಸ್ಎಲ್'ವಿಯನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ ಇಸ್ರೋ ಹಾಗೂ ವಿಜ್ಞಾನಿಗಳಿಗೆ ಹೃದಯಪೂರ್ವಕವಾಗಿ ಶುಭಾಶಯಗಳನ್ನು ಹೇಳುತ್ತಿದ್ದೇನೆಂದು ಹೇಳಿದ್ದಾರೆ. 
ಹೊಸ ವರ್ಷದ ಈ ಸಂದರ್ಭದಲ್ಲಿ ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಲಭಿಸಿರುವ ಈ ಯಶಸ್ಸು ದೇಶದ ಪ್ರಜೆಗಳಿಗೆ, ರೈತರಿಗೆ, ಮೀನುಗಾರರಿಗೆ ತ್ವರಿತ ಅಭಿವೃದ್ಧಿಗೆ ಪ್ರಯೋಜನವಾಗಲಿದೆ. 100ನೇ ಉಪಗ್ರಹ ಉಡಾವಣೆ ಇಸ್ರೋದ ಅದ್ಭುತ ಸಾಧನೆಗೆ ಸಾಕ್ಷಿಯಾಗಿದ್ದು, ಭಾರತದ ಬಾಹ್ಯಾಕಾಶ ಕಾರ್ಯಕ್ರಮಗಳಿಗೆ ಉಜ್ವಲ ಭವಿಷ್ಯ ರೂಪಿಸಿದೆ ಎಂದಿದ್ದಾರೆ.
ಇದರಂತೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿದ್ದು, ಈ ಸಂದರ್ಭ ಪ್ರತೀಯೊಬ್ಬ ಭಾರತೀಯ ಹೆಮ್ಮೆ ಪಡುವಂತಹದ್ದಾಗಿದೆ. ಕಾರ್ಟೋಸ್ಯಾಟ್-2 ಉಪಗ್ರಹ ಸೇರಿದಂತೆ ಭಾರತದ ಒಟ್ಟು ಮೂರು ಹಾಗೂ ಇತರೆ ದೇಶಗಳ ಒಟ್ಟು 28 ಉಗ್ರಹಗಳನ್ನು ಇಸ್ರೋ ಯಶಸ್ವಿಯಾಗಿ ಉಡಾವಣೆ ಮಾಡಿದೆ. ಇದು ಪ್ರತೀಯೊಬ್ಬ ಭಾರತೀಯ ಹೆಮ್ಮೆ ಪಡುವಂತಹ ಸಂದರ್ಭವಾಗಿದೆ. ಇಸ್ರೋ ಹಾಗೂ ಅದರ ಎಲ್ಲಾ ವಿಜ್ಞಾನಿಗಳಿಗೂ ಈ ಮೂಲಕ ಶುಭಾಶಯಗಳನ್ನು ಕೋರುತ್ತೇನೆಂದು ಹೇಳಿದ್ದಾರೆ. 
SCROLL FOR NEXT