ದೇಶ

ಇಸ್ರೋ 100ನೇ ಉಪಗ್ರಹ ಉಡಾವಣೆ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅಭಿನಂದನೆ

Raghavendra Adiga
ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ತನ್ನ ನೂರನೇ ಉಪಗ್ರಹ ಉಡಾವಣೆ ಯಶಸ್ವಿಯಾಗಿ ಪೂರೈಸಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇಸ್ರೋ ಸಾಧನೆಗೆ ಪ್ರಶಸೆ ವ್ಯಕ್ತಪಡಿಸಿದ್ದಾರೆ. 
"ಇಸ್ರೋದ ಕಠಿಣ ಪರಿಶ್ರಮ ಮತ್ತು ಸಮರ್ಪಣೆ ಮನೋಭಾವ ಭಾರತವನ್ನು ಬಾಹ್ಯಾಕಾಶ ಕ್ಷೇತ್ರದಲ್ಲಿ ಪ್ರಕಾಶಿಸುವಂತೆ ಮಾಡಿದೆ .ಮತ್ತೆ ಪುನಃ ಇತಿಹಾಸ ನಿರ್ಮಾಣ ಮಾಡಿದ್ದಕ್ಕಾಗಿ ಇಸ್ರೋಗೆ ಧನ್ಯವಾದಗಳು." ರಾಹುಲ್ ಗಂಆಧಿ ತಮ್ಮ ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.
ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಹಾಗು ರಾಷ್ಟ್ರಪತಿ ರಾಮ ನಾಥ ಕೋವಿಂದ್ ಸಹ ಇಸ್ರೋ ಸಾಧನೆಗೆ ಮೆಚ್ಚುಗೆ ಸೂಚಿಸಿದ್ದರು.
ಇಂದು ಬೆಳಗ್ಗೆ ಇಸ್ರೋ ತನ್ನ 100ನೇ ಉಪಗ್ರಹ ಕಾರ್ಟೋಸ್ಯಾಟ್-2 ಸೇರಿ 31 ಉಗ್ರಹಗಳನ್ನು ಯಶಸ್ವಿಯಾಗಿ ಉಡಾವಣೆ ಮಾಡಿತ್ತು. 
SCROLL FOR NEXT