ದೇಶ

ಶಶಿಕಲಾ ಕೊಠಡಿಯಲ್ಲಿ ಗುಟ್ಕಾ ಹಗರಣದ ರಹಸ್ಯ ಪತ್ರ ಪತ್ತೆ: ಕೋರ್ಟ್ ಗೆ ಐಟಿ ಮಾಹಿತಿ

Lingaraj Badiger
ಚೆನ್ನೈ: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಎಐಎಡಿಎಂಕೆ ಉಚ್ಚಾಟಿತ ನಾಯಕಿ ಶಶಿಕಲಾ ವಾಸಿಸುತ್ತಿದ್ದ ಪೋಯಸ್ ಗಾರ್ಡನ್ ನಿವಾಸದ ಕೊಠಡಿಯಲ್ಲಿ ಗುಟ್ಕಾ ಹಗರಣಕ್ಕೆ ಸಂಬಂಧಿಸಿದ ರಹಸ್ಯ ಪತ್ತೆ ಪತ್ತೆಯಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶುಕ್ರವಾರ ಮದ್ರಾಸ್ ಹೈಕೋರ್ಟ್ ಗೆ ಮಾಹಿತಿ ನೀಡಿದ್ದಾರೆ.
ಚೆನ್ನೈ ಆದಾಯ ತೆರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಸುಸೀ ಬಾಬು ವರ್ಗೀಸ್ ಅವರು ಮದ್ರಾಸ್ ಹೈಕೋರ್ಟ್ ಗೆ ಸಲ್ಲಿಸಿದ ಅಫಿಡವಿಟ್ ನಲ್ಲಿ ಈ ಮಾಹಿತಿ ನೀಡಿದ್ದಾರೆ. 
ನಿಷೇಧಿತ ಗುಟ್ಕಾ ಮಾರಾಟ ಹಗರಣದಲ್ಲಿ ರಾಜ್ಯದ ಸಚಿವರು, ಉನ್ನತ ಅಧಿಕಾರಿಗಳು ಹಾಗೂ ಕೇಂದ್ರ ಸರ್ಕಾರ ಅಧಿಕಾರಿಗಳು ಭಾಗಿಯಾಗಿದ್ದು, ಹಗರಣವನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಡಿಎಂಕೆ ಶಾಸಕ ಅನ್ಬಗಳನ್ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಆಗಸ್ಟ್ 11, 2016ರಂದು ಆದಾಯ ತೆರಿಗೆ ಇಲಾಖೆ ಅಂದಿನ ನಿರ್ದೇಶಕರು ಗುಟ್ಕಾ ಹಗರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮತ್ತು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಪತ್ರ ಬರೆಯಲಾಗಿದೆ ಎಂದು ಅಫಿಡವಿಟ್ ನಲ್ಲಿ ತಿಳಿಸಲಾಗಿದೆ.
ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ.ಜೆ.ಜಯಲಲಿತಾ ಅವರ ವೇದ ನಿಲಯಂ ನವೆಂಬರ್ 17, 2017ರಲ್ಲಿ ದಾಳಿ ನಡೆಸಿದಾಗ ಶಶಿಕಲಾ ಕೊಠಡಿಯಲ್ಲಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಅಂದಿನ ಮುಖ್ಯಮಂತ್ರಿ ಜಯಲಲಿತಾಗೆ ಬರೆದ ಪತ್ರ ಹಾಗೂ ಇತರೆ ದಾಖಲೆಗಳನ್ನು ಜಪ್ತಿ ಮಾಡಲಾಗಿದೆ ಎಂದು ವರ್ಗೀಸ್ ಅವರು ಅಫಿಡವಿಟ್ ನಲ್ಲಿ ತಿಳಿಸಿದ್ದಾರೆ.
SCROLL FOR NEXT