ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಗೆ ಕೊಲೆ ಬೆದರಿಕೆ
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಗೆ ಜೀವ ಬೆದರಿಕೆ ಹಾಕಲಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಯುವಕನನ್ನು ಬಂಧಿಸಲಾಗಿದೆ.
ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಗೆ ಜೀವ ಬೆದರಿಕೆ ಹಾಕಲಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಯುವಕನನ್ನು ಬಂಧಿಸಲಾಗಿದೆ.
ಪಾಟ್ನಾದ ಎಸ್ ಪಿ ಈ ಬಗ್ಗೆ ಮಾತನಾಡಿದ್ದು ಪ್ರಮೋದ್ ಕುಮಾರ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಪ್ರಮೋದ್ ಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದ ವಿಡಿಯೋದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಅಂಗರಕ್ಷಕರ ಸಮೇತ ಉಡಾಯಿಸುವುದಾಗಿ ಬೆದರಿಕೆ ಹಾಕಿದ್ದ. ಈ ವಿಡಿಯೋ ವೈರಲ್ ಆಗಿತ್ತು. ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಪೊಲೀಸರು ಕ್ರಮ ಕೈಗೊಂಡಿದ್ದು, ಯುವಕನನ್ನು ಬಂಧಿಸಿದ್ದಾರೆ.
ಉದ್ಯಮಕ್ಕೆ ಸಮಸ್ಯೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿದ್ದ ಯುವಕ ನಿತೀಶ್ ಕುಮಾರ್ ವಿರುದ್ಧ ಈ ರೀತಿ ಅಸಮಾಧಾನ ವ್ಯಕ್ತಪಡಿಸಿದ್ದಾನೆ ಎನ್ನಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.