ದೀಪಕ್ ಮಿಶ್ರಾ ಮನೆ ಬಳಿ ನಿಂತಿರುವ ಕಾರಿನಲ್ಲಿ ನೃಪೇಂದ್ರ ಮಿಶ್ರಾ ಇರುವ ಚಿತ್ರವನ್ನು ಎಎನ್ಐ ಟ್ವೀಟ್ ಮಾಡಿದೆ. 
ದೇಶ

ನ್ಯಾಯಾಧೀಶರ ದಂಗೆ: ಸಿಜೆಐ ಮನೆಗೆ ಮೋದಿ ತಮ್ಮ ಕಾರ್ಯದರ್ಶಿ ಕಳುಹಿಸಿದ್ದನ್ನು ಪ್ರಶ್ನಿಸಿದ ಕಾಂಗ್ರೆಸ್

ಸುಪ್ರೀಂ ಕೋರ್ಟ್ ನ್ಯಾಯಾಧೀಶರ ದಂಗೆ ವಿಚಾರದಲ್ಲಿ ತಾನು ಮಧ್ಯ ಪ್ರವೇಶಿಸುವುದಿಲ್ಲ ಎಂದಿದ್ದ ಕೇಂದ್ರ ಸರ್ಕಾರ, ಶನಿವಾರ ಪ್ರಧಾನಿ ನರೇಂದ್ರ....

ನವದೆಹಲಿ: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ದಂಗೆ ವಿಚಾರದಲ್ಲಿ ತಾನು ಮಧ್ಯ ಪ್ರವೇಶಿಸುವುದಿಲ್ಲ ಎಂದಿದ್ದ ಕೇಂದ್ರ ಸರ್ಕಾರ, ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರ ಮುಖ್ಯ ಕಾರ್ಯದರ್ಶಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ(ಸಿಜೆಐ) ದೀಪಕ್ ಮಿಶ್ರಾ ಅವರ ನಿವಾಸಕ್ಕೆ ತೆರಳಿದ್ದನ್ನು ಕಾಂಗ್ರೆಸ್ ಪ್ರಶ್ನಿಸಿದೆ.
ಇಂದು ಬೆಳಗ್ಗೆ ಮೋದಿ ಅವರ ಮುಖ್ಯ ಕಾರ್ಯದರ್ಶಿ ನೃಪೇಂದ್ರ ಮಿಶ್ರಾ ಅವರು ದೀಪಕ್‌ ಮಿಶ್ರಾ ಅವರ ನಿವಾಸದ ಬಳಿ ಕಾರಿನಲ್ಲಿ ಕಾಣಿಸಿಕೊಂಡಿದ್ದರು. 
ಪ್ರಧಾನಿ ಮೋದಿ ಅವರ ಮುಖ್ಯ ಕಾರ್ಯದರ್ಶಿಯಾಗಿ ನೃಪೇಂದ್ರ ಮಿಶ್ರಾ ಸಿಜೆಐ ನಿವಾಸಕ್ಕೆ ಭೇಟಿ ನೀಡಿದ್ದು, ಯಾವ ಕಾರಣಕ್ಕೆ ಮೋದಿ ತಮ್ಮ ಕಾರ್ಯದರ್ಶಿಯನ್ನು ಕಳುಹಿಸಿದ್ದರು ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಕಾಂಗ್ರೆಸ್ ವಕ್ತಾರ ರಂದೀಪ್ ಸಿಂಗ್ ಸುರ್ಜೆವಾಲಾ ಅವರು ಟ್ವೀಟ್ ಮಾಡಿದ್ದಾರೆ.
ಸುಪ್ರೀಂ ಕೋರ್ಟ್‌ನ ಎರಡನೇ ಅತ್ಯಂತ ಹಿರಿಯ ನ್ಯಾಯಮೂರ್ತಿ ಜೆ. ಚಲಮೇಶ್ವರ್‌ ಮತ್ತು ನ್ಯಾಯಮೂರ್ತಿಗಳಾದ ರಂಜನ್‌ ಗೊಗೋಯ್‌, ಮದನ್‌ ಬಿ.ಲೋಕೂರ್‌ ಮತ್ತು ಕುರಿಯನ್‌ ಜೋಸೆಫ್‌ ಪತ್ರಿಕಾಗೋಷ್ಠಿ ನಡೆಸಿದ ಮರುದಿನವೇ ಪ್ರಧಾನಿ ಕಾರ್ಯದರ್ಶಿ ಸಿಜೆಐ ನಿವಾಸಕ್ಕೆ ಭೇಟಿ ನೀಡಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.
ಸುಪ್ರೀಂ ಕೋರ್ಟ್‌ನೊಳಗೆ ಹಲವು ಸಮಸ್ಯೆಗಳಿದ್ದು ಇದು ದೇಶದ ಅತ್ಯುನ್ನತ ನ್ಯಾಯ ಸಂಸ್ಥೆಯನ್ನು ಬಾಧಿಸುವುದರ ಜತೆಗೆ ದೇಶದ ಪ್ರಜಾತಂತ್ರವನ್ನೇ ಅಪಾಯಕ್ಕೆ ಒಡ್ಡಲಿದೆ ಎಂದು ಹಿರಿಯ ನ್ಯಾಯಮೂರ್ತಿಗಳು ಪತ್ರಿಕಾಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!