ಸಾಂದರ್ಭಿಕ ಚಿತ್ರ 
ದೇಶ

ಚಿಕ್ಕಬಳ್ಳಾಪುರ: ಸೇಬು ತಿಂದು ಸಾವನ್ನಪ್ಪಿದ 11 ವರ್ಷದ ಬಾಲಕ!

ಗಂಟಲಲ್ಲಿ ಸೇಬು ಹಣ್ಣು ಸಿಕ್ಕಿ ಹಾಕಿಕೊಂಡು 11 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ: ಗಂಟಲಲ್ಲಿ ಸೇಬು ಹಣ್ಣು ಸಿಕ್ಕಿ ಹಾಕಿಕೊಂಡು 11 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರದ ನಕ್ಕಲಕುಂಟೆಯ ಶಾಂತಿನಗರದ ನಿವಾಸಿ ಕಿಜರ್‌ ಎಂಬುವರ ಪುತ್ರ ಆಸಿಫ್‌ (11 ವರ್ಷ) ಎಂಬ ಬಾಲಕ ಸೇಬು ಹಣ್ಣು ತಿಂದು ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. 
ಮೂಲಗಳ ಪ್ರಕಾರ ಇತ್ತೀಚೆಗೆ ಮರದಿಂದ ಬಿದ್ದು ಕಾಲಿಗೆ ಗಾಯ ಮಾಡಿಕೊಂಡು ಜ್ವರದಿಂದ ಬಳಲುತ್ತಿದ್ದ ಆಸಿಫ್‌, ಚಿಕಿತ್ಸೆ ಪಡೆಯುತ್ತ ಮನೆಯಲ್ಲಿಯೇ ಇದ್ದ. ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸೇಬು ಹಣ್ಣು ತಿನ್ನುವ ವೇಳೆ ಏಕಾಏಕಿ  ಕುಸಿದು ಬಿದ್ದು ಆಸಿಫ್ ಅಸ್ವಸ್ಥಗೊಂಡಿದ್ದ. ಕೂಡಲೇ ಪೋಷಕರು ಆಸಿಫ್ ನನ್ನು ಆಸ್ಪತ್ರೆಗೆ ಕರೆದೊಯ್ದರಾದರೂ ಆತ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಇನ್ನು ಮಗನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ  ಕಿಜರ್ ಅವರು ಈ ಬಗ್ಗೆ ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು.
ಆಸಿಫ್‌ ಶವದ ಮರಣೋತ್ತರ ಪರೀಕ್ಷೆ ನಡೆಸಿದ ಜಿಲ್ಲಾ ಆಸ್ಪತ್ರೆಯ ವೈದ್ಯರು ಗಂಟಲಿನಲ್ಲಿ ಸೇಬು ಸಿಕ್ಕಿಹಾಕಿಕೊಂಡಿದ್ದರಿಂದಲೇ ಬಾಲಕ ಮೃತಪಟ್ಟಿದ್ದಾನೆ ಎಂದು ಮೌಖಿಕವಾಗಿ ತಿಳಿಸಿದ್ದಾರೆ ಎಂದು ಪೊಲೀಸರು ಹೇಳಿದರು.
ಜ್ವರದಿಂದ ಸುಸ್ತಾಗಿದ್ದ ಆಸಿಫ್ ಗೆ ಪೋಷಕರು ತಿನ್ನವು ಆ್ಯಪಲ್ ನೀಡಿದ್ದರಂತೆ..ಆದರೆ ಅದು ಗಂಟಲಲ್ಲೇ ಸಿಕ್ಕಿ ಹಾಕಿಕೊಂಡು ಆಸಿಫ್ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ. ಅಂತೆಯೇ ಯಾವುದೇ ಹಣ್ಣು ಅಥವಾ ಆಹಾರವಿರಲಿ ಚೆನ್ನಾಗಿ ಅಗೆದು ತಿನ್ನುವುದು ಉತ್ತಮ ಎಂದೂ ವೈದ್ಯರು ಸಲಹೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ