ನವದೆಹಲಿ: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಭಾರತಕ್ಕೆ ಆಗಮಿಸಿದ್ದು, 15 ವರ್ಷಗಳ ಬಳಿಕ ಇಸ್ರೇಲ್ ಪ್ರಧಾನಿಯೊಬ್ಬರು ಭಾರತಕ್ಕೆ ಆಗಮಿಸಿದ್ದಾರೆ.
ಶಿಷ್ಟಾಚಾರ ಬದಿಗಿರಿಸಿ ವಿಮಾನ ನಿಲ್ದಾಣದಲ್ಲಿ ಇಸ್ರೇಲ್ ಪ್ರಧಾನಿಯನ್ನು ಸ್ವಾಗತಿಸಿರುವ ಪ್ರಧಾನಿ ನರೇಂದ್ರ ಮೋದಿ, ಭಾರತಕ್ಕೆ ಸ್ವಾಗತ ನನ್ನ ಆತ್ಮೀಯ ಗೆಳೆಯ ಎಂದು ಟ್ವೀಟ್ ಮಾಡಿದ್ದಾರೆ. ಭಾರತಕ್ಕೆ ಇಸ್ರೇಲ್ ಪ್ರಧಾನಿಯ ಭೇಟಿ ಐತಿಹಾಸಿಕವಾದದ್ದು, ನಮ್ಮ ರಾಷ್ಟ್ರಗಳ ನಡುವಿನ ಬಾಂಧವ್ಯವನ್ನು ಮತ್ತಷ್ಟು ಹೆಚ್ಚಿಸಲಿದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.