ಮಕರ ಸಂಕ್ರಾಂತಿ ಸಂಭ್ರಮ, ದೇಶದ ಜನತೆಗೆ ಶುಭಾಶಯ ಹೇಳಿದ ಮೋದಿ 
ದೇಶ

ಮಕರ ಸಂಕ್ರಾಂತಿ ಸಂಭ್ರಮ, ದೇಶದ ಜನತೆಗೆ ಶುಭಾಶಯ ಹೇಳಿದ ಮೋದಿ

ಮಕರ ಸಂಕ್ರಾಂತಿ, ಪೊಂಗಲ್, ಉತ್ತರಾಯಣ ಹಬ್ಬದ ಸಂಭ್ರಮದ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಶುಭ ಹಾರೈಸಿದ್ದಾರೆ.

ನವದೆಹಲಿ: ಮಕರ ಸಂಕ್ರಾಂತಿ, ಪೊಂಗಲ್, ಉತ್ತರಾಯಣ ಹಬ್ಬದ ಸಂಭ್ರಮದ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಶುಭ ಹಾರೈಸಿದ್ದಾರೆ.
ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಸರಣಿ ಟ್ವೀಟ್ ಮಾಡುವ ಮೂಲಕ ಮೋದಿ ಶುಭಾಶಯ ಹೇಳಿದ್ದು "ಮಕರ ಸಂಕ್ರಾಂತಿ ಸಂದರ್ಭದಲ್ಲಿ, ನಾನು ಎಲ್ಲಾ ಜನರಿಗೂ ನನ್ನ ಶುಭಾಶಯಗಳನ್ನು ಹೇಳುತ್ತೇನೆ" ಎಂದು ಟ್ವೀಟ್ ಮಾಡಿದ್ದಾರೆ.
i
ಮಾಘ ಬಿಹು ಸಂದರ್ಭದಲ್ಲಿ ದೇಶದ ಜನರಿಗೆ ಶುಭ ಕೋರಿದ ಪ್ರಧಾನಿ  "ಈ ಹಬ್ಬವು ಸಹೋದರತ್ವದ ಬಂಧವನ್ನು ಬಲಪಡಿಸುತ್ತದೆ ಮತ್ತು ನಮ್ಮ ಸಮಾಜವನ್ನು ಹೆಚ್ಚು ಸಂತೋಷ ಮತ್ತು ಸಮೃದ್ಧಗೊಳಿಸುತ್ತದೆ" ಎಂದು ಹೇಳಿದ್ದಾರೆ.
ಇಂದು ದೇಶದಾದ್ಯಂತ ಮಕರ ಸಂಕ್ರಾಂತಿ, ಉತ್ತರಾಯಣ ಪ್ರಾರಂಭದ ಹಬ್ಬವನ್ನು ಆಚರಿಸಲಾಗುತ್ತಿದ್ದು ದೇವಾಲಯಗಳಿಗೆ ತೆರಳಿ ಭಕ್ತರು ದೇವರ ದರ್ಶನ ಪಡೆಯುತ್ತಿದ್ದಾರೆ. ಮನೆಯಲ್ಲಿ ಎಳ್ಳು-ಬೆಲ್ಲ, ಸಿಹಿ ತಿನಿಸು ಮಾಡಿ ಮನೆ ಮನೆಗೆ ಹಂಚುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!