ದೇಶ

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಲೋಡ್ ಶೆಡ್ಡಿಂಗ್: ವ್ಯಾಪಾರಿಗಳಿಂದ ಪ್ರತಿಭಟನೆ

Srinivas Rao BV
ಮುಜಾಫರಾಬಾದ್: ಪಾಕ್ ಆಕ್ರಮಿತ ಕಾಶ್ಮೀರದ ಮುಜಾಫರಾಬಾದ್ ನಲ್ಲಿ ಮಿತಿಮೀರಿ ಲೋಡ್ ಶೆಡ್ಡಿಂಗ್ ಮಾಡಲಾಗುತ್ತಿದ್ದು, ವ್ಯಾಪಾರಿಗಳು ನೀಲಮ್ ಕಣಿವೆ ರಸ್ತೆ ತಡೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ. 
ಆಕ್ರೋಶಗೊಂಡಿರುವ ವ್ಯಾಪಾರಿಗಳು ಟ್ರಾನ್ಸ್ಫಾರ್ಮರ್ ಗಳಿಗೆ ಹಾನಿಯುಂಟುಮಾಡಿದ್ದು, ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದ ಪ್ರಧಾನಿ ವಿರುದ್ಧ ಘೋಷಣೆ ಕೂಗಿದ್ದಾರೆ. ಮುಜಾಫರಾಬಾದ್ ನ ಅಂಜುಮನ್ ತಾಜಿರಾನ್ ವ್ಯಾಪಾರಿಗಳ ಯೂನಿಯನ್ ಪ್ರತಿಭಟನೆ ಮಾಡಿದ್ದು, ವಿದ್ಯುತ್ ಕಡಿತದಿಂದ ವ್ಯಾಪಾರಕ್ಕೆ ಅಪಾರ ಹಾನಿ ಉಂಟಾಗುತ್ತಿದೆ ಎಂದು ಪ್ರತಿಭಟನಾ ನಿರತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 
ನಮ್ಮ ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದೇವೆ, ಆದರೆ ಅದಕ್ಕೆ ಅವರು ಸ್ಪಂದಿಸುತ್ತಿಲ್ಲ. ಪಿಎಂಎಲ್(ಎನ್) ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಸಮಸ್ಯೆಗಳು ಹೆಚ್ಚಾಗಿವೆ ಎಂದು ಹೇಳಿದ್ದಾರೆ. 
SCROLL FOR NEXT