ಸಂಗ್ರಹ ಚಿತ್ರ 
ದೇಶ

ಉರಿ ಸೆಕ್ಟರ್ ನಲ್ಲಿ ಐದು ಉಗ್ರರ ಹತ್ಯೆಗೈದ ಭಾರತೀಯ ಸೇನೆ, 6ನೇ ಉಗ್ರನ ಶವಕ್ಕಾಗಿ ಶೋಧ

2016ರ ಉರಿ ಸೆಕ್ಟರ್ ಮೇಲಿನ ದಾಳಿ ರೂಪದಲ್ಲೇ ಮತ್ತೊಂದು ಭೀಕರ ಉಗ್ರ ದಾಳಿಯ ಯೋಜನೆಯೊಂದಿಗೆ ಭಾರತದ ಗಡಿ ಪ್ರವೇಶ ಮಾಡಿದ್ದ ನಾಲ್ಕು ಮಂದಿ ಉಗ್ರರನ್ನು ಭಾರತೀಯ ಸೇನೆ ಸೋಮವಾರ ಸೆದೆಬಡಿದಿದೆ.

ಶ್ರೀನಗರ: 2016ರ ಉರಿ ಸೆಕ್ಟರ್ ಮೇಲಿನ ದಾಳಿ ರೂಪದಲ್ಲೇ ಮತ್ತೊಂದು ಭೀಕರ ಉಗ್ರ ದಾಳಿಯ ಯೋಜನೆಯೊಂದಿಗೆ ಭಾರತದ ಗಡಿ ಪ್ರವೇಶ ಮಾಡಿದ್ದ ಐದು ಮಂದಿ ಉಗ್ರರನ್ನು ಭಾರತೀಯ ಸೇನೆ ಸೋಮವಾರ  ಸೆದೆಬಡಿದಿದೆ.
ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ಇಂದು ಬೆಳಗ್ಗೆ ಅಕ್ರಮವಾಗಿ ಗಡಿಯೊಳಗೆ ನುಸುಳಲು ಯತ್ನಿಸಿದ ಪಾಕಿಸ್ತಾನ ಮೂಲದ ಜೈಶ್ ಇ ಮೊಹಮದ್ ಉಗ್ರ ಸಂಘಟನೆಗೆ ಸೇರಿದೆ ಐದೂ ಮಂದಿ ಆತ್ಮಹತ್ಯಾ ದಾಳಿಕೋರ ಉಗ್ರರನ್ನು  ಭಾರತೀಯ ಸೇನೆಯ ಸೈನಿಕರು ಹೊಡೆದುರುಳಿಸಿದ್ದಾರೆ. ಅಂತೆಯೇ ಮತ್ತೋರ್ವ ಉಗ್ರನ ಶವಕ್ಕಾಗಿ ತೀವ್ರ ಶೋಧ ನಡೆಸಲಾಗುತ್ತಿದೆ.
ಸೇನಾಧಿಕಾರಿಗಳು ತಿಳಿಸಿರುವಂತೆ, ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್ ದುಲಾಂಜ ಪ್ರಾಂತ್ಯದಲ್ಲಿ ಒಳನುಸುಳುತ್ತಿದ್ದ ಐದಕ್ಕೂ ಅಧಿಕ ಉಗ್ರರನ್ನು ಜಮ್ಮು ಮತ್ತು ಕಾಶ್ಮೀರದ ಪೊಲೀಸರು, ಸೇನೆ, ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ (ಸಿಎಪಿಎಫ್) ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಹೊಡೆದುರುಳಿಸಲಾಗಿದೆ. ಇನ್ನು ಘಟನಾ ಸ್ಥಳದಲ್ಲಿ ಉಗ್ರರ ಬಳಿ ಇದ್ದ ಭಾರಿ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅಂತೆಯೇ ಸ್ಥಳದ್ಲಲ್ಲಿ  ಮತ್ತಷ್ಟು ಉಗ್ರರು ಅಡಗಿರುವ ಶಂಕೆ ಮೇರೆಗೆ ವ್ಯಾಪಕ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.
2016ರ ಸೆಪ್ಟೆಂಬರ್ 18ರಂದು ಉರಿ ಸೆಕ್ಟರ್ ನಲ್ಲಿ ಭಾರತೀಯ ಸೇನಾ ವಾಹನದ ಮೇಲೆ ದಾಳಿ ನಡೆಸಿದ್ದ ಉಗ್ರರು 19 ಮಂದಿ ಸೈನಿಕರನ್ನು ಕೊಂದು ಹಾಕಿದ್ದರು. ಈ ವೇಳೆ ನಾಲ್ಕು ಉಗ್ರರನ್ನು ಕೊಲ್ಲಲಾಗಿತ್ತಾದರೂ ಸೈನಿಕರ ಸಾವು  ಹೆಚ್ಚಿನ ಪ್ರಮಾಣದಲ್ಲಿತ್ತು. ಇದರ ಬೆನ್ನಲ್ಲೇ ಭಾರತೀಯ ಸೇನೆ ಪಾಕ್ ಆಕ್ರಮಿತ ಕಾಶ್ಮೀರದೊಳಗೆ ನುಗ್ಗಿ ಅಲ್ಲಿನ ಉಗ್ರ ಕ್ಯಾಂಪ್ ಗಳನ್ನು ಧ್ವಂಸ ಮಾಡಿದ್ದಲ್ಲದೇ 60ಕ್ಕೂ ಹೆಚ್ಚು ಉಗ್ರರನ್ನು ಕೊಂದು ಹಾಕಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!