ಪ್ರವೀಣ್ ತೊಗಾಡಿಯಾ 
ದೇಶ

ಪ್ರವೀಣ್ ತೊಗಾಡಿಯಾ ಹತ್ಯೆಗೆ ಸಂಚು ಆರೋಪ, ತನಿಖೆಗೆ ಕಾಂಗ್ರೆಸ್ ಆಗ್ರಹ

ತಮ್ಮ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂಬ ವಿಶ್ವ ಹಿಂದೂ ಪರಿಷತ್ ಅಂತರರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ...

ಮುಂಬೈ: ತಮ್ಮ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂಬ ವಿಶ್ವ ಹಿಂದೂ ಪರಿಷತ್ ಅಂತರರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ ಆರೋಪದ ಬಗ್ಗೆ ತನಿಖೆ ನಡೆಸಬೇಕು ಎಂದು ಮುಂಬೈ ಕಾಂಗ್ರೆಸ್ ಅಧ್ಯಕ್ಷ ಸಂಜಯ್ ನಿರೂಪಮ್ ಅವರು ಮಂಗಳವಾರ ಒತ್ತಾಯಿಸಿದ್ದಾರೆ.
ನಮ್ಮ ಪಕ್ಷ ಮತ್ತು ಪ್ರವೀಣ್ ತೊಗಾಡಿಯಾ ನಡುವೆ ಸೈದ್ಧಾಂತಿಕ ಭಿನ್ನಾಭಿಪ್ರಾಯ ಇರಬಹುದು. ಆದರೆ ಮಾನವೀಯ ದೃಷ್ಟಿಯಿಂದ ಅವರಿಗೆ ಸಹಾನುಭೂತಿ ನೀಡುತ್ತಿದ್ದೇವೆ ಎಂದು ಸಂಜಯ್ ನಿರೂಪಮ್ ತಿಳಿಸಿದ್ದಾರೆ.
ನಿನ್ನೆ ನಾಪತ್ತೆಯಾಗಿದ್ದ ಪ್ರವೀಣ್ ತೊಗಾಡಿಯಾ ಇಂದು ದೀಢರ್ ಪ್ರತ್ಯಕ್ಷವಾಗಿ, ತಮ್ಮನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲು ಸಂಚು ನಡೆದಿತ್ತು ಎಂದು ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ತೊಗಾಡಿಯಾ, ಹಿಂದುತ್ವ ಮತ್ತು ರಾಮ ಮಂದಿರದ ಬಗ್ಗೆ ನಾನು ಮಾತನಾಡುವುದನ್ನು ಬಯಸದ ಜನ ನನ್ನ ವಿರುದ್ಧ ಪಿತೂರಿ ಮಾಡಿದ್ದಾರೆ. ಯಾರು ನನ್ನ ದನಿ ಅಡಗಿಸಲು ಬಯಸುತ್ತಿದ್ದಾರೆ ಎಂಬುದನ್ನು ಸಮಯ ಬಂದಾಗ ಸಾಕ್ಷ್ಯ ಸಮೇತ ಬಹಿರಂಗಪಡಿಸುವುದಾಗಿ ಹೇಳಿದರು.
ಸೋಮವಾರ ತೊಗಾಡಿಯಾರನ್ನು ಹುಡುಕಿಕೊಂಡು ರಾಜಸ್ಥಾನ ಪೊಲೀಸರ ತಂಡ ಅಹಮದಾಬಾದ್‌ಗೆ ಬಂದಿತ್ತು. ಆದರೆ, ಅವರು ನಾಪತ್ತೆಯಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವೀರಶೈವ-ಲಿಂಗಾಯತ ಬೇರೆ ಮಾಡಲು ಹೋದಾಗ ಮಠಾಧೀಶರ ಕ್ಷಮೆ ಕೇಳಿದ್ದೆ: ನಾವು ಸೂಜಿಯಂತೆ ಹೊಲಿಯುವವರೇ ಹೊರತು ಕತ್ತರಿಯಲ್ಲ ಎಂದ ಸಿಎಂ ಡಿಕೆಶಿ

ಡಿಕೆಶಿನೇ ಹೇಳಿದ್ದಾರೆ ನಿನ್ನ ಕ್ಷೇತ್ರಕ್ಕೆ ನಾನೇ ಬಾಸ್ ಅಂತ: ನನ್ನ ಕ್ಷೇತ್ರಕ್ಕೆ ಕೈ ಹಾಕಿದ್ರೆ ಬಿಡಲ್ಲ; MC Sudhakarಗೆ ಪ್ರದೀಪ್ ಪರೋಕ್ಷ ಟಾಂಗ್‌

'SIR ನಿಲ್ಲಲ್ಲ, ಜ್ಞಾನೇಶ್ ಕುಮಾರ್ ಕೂಡ ಹೋಗಲ್ಲ’; ಪ್ರಶ್ನೆ ಏನು ಅಂದ್ರೆ ಪ್ರತಿಭಟನೆಗಳ ಗತಿ ಏನು?: ಪತ್ರಕರ್ತ ಭೂಪೇಂದ್ರ ಚೌಬೆ

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ