ನಟ ಕಮಲ್ ಹಾಸನ್ (ಸಂಗ್ರಹ ಚಿತ್ರ) 
ದೇಶ

ಫೆಬ್ರವರಿ 21ರಂದು ನಟ ಕಮಲ್ ಹಾಸನ್ ಹೊಸ ಪಕ್ಷದ ಹೆಸರು ಘೋಷಣೆ!

ಸೂಪರ್ ಸ್ಟಾರ್ ರಜನಿಕಾಂತ್ ಹೊಸ ಪಕ್ಷ ಸ್ಥಾಪನೆ ಕುರಿತು ಘೋಷಣೆಯಾದ ಬೆನ್ನಲ್ಲೇ ದಕ್ಷಿಣ ಭಾರತದ ಮತ್ತೋರ್ವ ಖ್ಯಾತ ನಟ ಕಮಲ್ ಹಾಸನ್ ಹೊಸ ಪಕ್ಷ ಕಟ್ಟುವ ನಿರ್ಧಾರಕ್ಕೆ ಬಂದಿದ್ದು, ಇದೇ ಫೆಬ್ರವರಿ 21ರಂದು ತಮ್ಮ ಪಕ್ಷದ ಹೆಸರು ಘೋಷಣೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಹೊಸ ಪಕ್ಷ ಸ್ಥಾಪನೆ ಕುರಿತು ಘೋಷಣೆಯಾದ ಬೆನ್ನಲ್ಲೇ ದಕ್ಷಿಣ ಭಾರತದ ಮತ್ತೋರ್ವ ಖ್ಯಾತ ನಟ ಕಮಲ್ ಹಾಸನ್ ಹೊಸ ಪಕ್ಷ ಕಟ್ಟುವ ನಿರ್ಧಾರಕ್ಕೆ ಬಂದಿದ್ದು, ಇದೇ ಫೆಬ್ರವರಿ 21ರಂದು  ತಮ್ಮ ಪಕ್ಷದ ಹೆಸರು ಘೋಷಣೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.
ನಟ ಕಮಲ್ ಹಾಸನ್ ತಮ್ಮ ರಾಜಕೀಯ ಪಕ್ಷದ ಹೆಸರನ್ನು ಫೆಬ್ರವರಿ 21 ರಂದು ಘೋಷಣೆ ಮಾಡಲಿದ್ದು, ಅಲ್ಲದೆ, ತಮ್ಮ ಪಕ್ಷದ ಸಿದ್ಧಾಂತಗಳು, ಗುರಿಗಳೇನು ಎಂಬುದನ್ನೂ ಅವರು ಇದೇ ಸಂದರ್ಭದಲ್ಲಿ ಬಹಿರಂಗ ಪಡಿಸಲಿದ್ದಾರೆ  ಎಂದು ತಿಳಿದುಬಂದಿದೆ. ಅಂತೆಯೇ ಫೆಬ್ರವರಿ 21 ರಿಂದ ತಮಿಳುನಾಡಿನಾದ್ಯಂತ ಪ್ರವಾಸ ಕೈಗೊಳ್ಳಲಿರುವ ಕಮಲ್ ಹಾಸನ್ ಅದೇ ದಿನ ಪಕ್ಷದ ಹೆಸರನ್ನು ಘೋಷಿಸಲಿದ್ದಾರೆ. 
ಮೂಲಗಳ ಪ್ರಕಾರ ನಟ ಕಮಲ್ ಹಾಸನ್ ಅವರ ಮೂಲ ಊರಾದ ರಾಮನಾಥಪುರಂನಿಂದಲೇ ಅವರ ರಾಜ್ಯ ಪ್ರವಾಸ ಆರಂಭವಾಗಲಿದೆಯಂತೆ. ಬಳಿಕ ಮಧುರೈ, ದಿಂಡಿಗುಲ್ ಮತ್ತು ಶಿವಗಂಗೈ ಗಳಲ್ಲಿ ಕಮಲ್,  ಸ್ಥಳೀಯರೊಂದಿಗೆ ಸಂವಾದ ಸಹ ನಡೆಸಲಿದ್ದಾರೆ.
ಕಳೆದ 2017 ರ ನವೆಂಬರ್ ನಲ್ಲಿ ರಾಜಕೀಯ ಪಕ್ಷ ಸ್ಥಾಪಿಸುವ ಕುರಿತು ಸೂಚನೆ ನೀಡಿದ್ದ ಕಮಲ್ ಹಾಸನ್, ತಮ್ಮ ಉದ್ದೇಶ ಖಂಡಿತ ಪ್ರಚಾರ ಗಳಿಸುವುದಲ್ಲ ಎದು ಸ್ಪಷ್ಟಪಡಿಸಿದ್ದರು. "ನಾನು ಯಾವುದೇ ಪ್ರಚಾರಕ್ಕಾಗಲಿ  ರಾಜಕೀಯಕ್ಕೆ ಬರುತ್ತಿಲ್ಲ. ಅಥವಾ ನಾನೊಬ್ಬ ಬಂಡಾಯ ನಾಯಕ ಎಂದೂ ಭಾವಿಸಬೇಕಿಲ್ಲ. ನನಗೆ ನನ್ನ ಜನರನ್ನು ಅರ್ಥಮಾಡಿಕೊಳ್ಳುವುದಕ್ಕೆ ರಾಜಕೀಯವೊಂದು ಅತ್ಯಂತ ಪರಿಣಾಮಕಾರಿ ಮಾರ್ಗ ಎಂದು ನಾನು  ಭಾವಿಸಿದ್ದೇನೆ. ಕಲಿಯುವುದಕ್ಕೆ ಮತ್ತು ಜನ ಸೇವೆ ಮಾಡುವುದಕ್ಕೆ ಇದೊಂದು ಉತ್ತಮ ಅವಕಾಶ".  ಎಂದು ಅವರು ಹೇಳಿದ್ದರು. ಅಂತೆಯೇ ಅಕಸ್ಮಾತ್ ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶಿಸಿದರೆ ನಾನು ಅವರ  ಜೊತೆ ಕೆಲಸ ಮಾಡಲು ಸಿದ್ಧನಿದ್ದೇನೆ ಎಂದು ಸಹ ಕಳೆದ ಸೆಪ್ಟೆಂಬರ್ ನಲ್ಲಿ ಕಮಲ್ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!