ಚೆನ್ನೈ: ತಮ್ಮ ಹಾಗೂ ಕಮಲ್ ಹಾಸನ್ ಅವರ ರಾಜಕೀಯ ಮೈತ್ರಿ ಬಗ್ಗೆ ಕಾಲವೇ ನಿರ್ಧರಿಸಲಿದೆ ಎಂದು ಇತ್ತೀಚೆಗಷ್ಟೇ ರಾಜಕೀಯ ಪಕ್ಷ ಸ್ಥಾಪನೆ ಮಾಡಿರುವ ಸೂಪರ್ ಸ್ಟಾರ್ ರಜಿನಿಕಾಂತ್ ಹೇಳಿದ್ದಾರೆ.
ಕಮಲ್ ಹಾಸನ್ ಅವರೊಂದಿಗೆ ರಾಜಕೀಯ ಮೈತ್ರಿ ಮಾಡಿಕೊಳ್ಳುವುದರ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ರಜಿನಿಕಾಂತ್ ಕಾಲವೇ ಉತ್ತರಿಸಲಿದೆ ಎಂದು ಹೇಳಿದ್ದಾರೆ. ತಮಿಳುನಾಡಿನಲ್ಲಿ ಇಬ್ಬರೂ ಸ್ಟಾರ್ ನಟರು ರಾಜಕೀಯ ಪ್ರವೇಶವನ್ನು ಈಗಾಗಲೇ ಘೋಷಿಸಿದ್ದು ಕಮಲ್ ಹಾಸನ್ ಅವರ ರಾಜಕೀಯ ಪ್ರವೇಶಕ್ಕೆ ರಜಿನಿಕಾಂತ್ ಶುಭ ಹಾರೈಕೆ ಮಾಡಿದ್ದಾರೆ.
ಜ.21 ಕ್ಕೆ ಕಮಲ್ ಹಾಸನ್ ತಮ್ಮ ರಾಜಕೀಯ ಪಕ್ಷವನ್ನು ಅಧಿಕೃತವಾಗಿ ಘೋಷಿಸಲಿದ್ದಾರೆ.